ವಿರಾಜಪೇಟೆ ತಾಲೂಕಿನ ಕೊಳತೋಡು ಗ್ರಾಮದಲ್ಲಿ ಬುಧವಾರ ಮುಂಜಾನೆ ರಾಜ್ಯ ಹೆದ್ದಾರಿಯಲ್ಲಿ ಹುಲಿ ಕಾಣಿಸಿಕೊಂಡಿದ್ದು ಆತಂಕ ಸೃಷ್ಟಿಸಿದೆ.
ವಿರಾಜಪೇಟೆ : ವಿರಾಜಪೇಟೆ ತಾಲೂಕಿನ ಕೊಳತೋಡು ಗ್ರಾಮದಲ್ಲಿ ಬುಧವಾರ ಮುಂಜಾನೆ ರಾಜ್ಯ ಹೆದ್ದಾರಿಯಲ್ಲಿ ಹುಲಿ ಕಾಣಿಸಿಕೊಂಡಿದ್ದು ಆತಂಕ ಸೃಷ್ಟಿಸಿದೆ.
ಕೊಳತೋಡು ಗ್ರಾಮದ ಉದ್ಯಮಿ ನೀಲಾ ಅವರ ಮನೆಯ ಮುಂಭಾಗದ ರಾಜ್ಯ ಹೆದ್ದಾರಿಯಲ್ಲಿ ಬೆಳಗ್ಗೆ ಸುಮಾರು 4.30ರ ವೇಳೆಗೆ ಹುಲಿ ಕಾಣಿಸಿಕೊಂಡಿದೆ. ಹುಲಿ ರಸ್ತೆ ದಾಟುತ್ತಿರುವ ದೃಶ್ಯ ಕಂಡುಬಂದಿದೆ. ಈ ಭಾಗದಲ್ಲಿ ಬೆಳಗ್ಗೆ ವಾಯುವಿಹಾರಕ್ಕೆ ತೆರಳುವವರು ಹಾಗೂ ದ್ವಿಚಕ್ರ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಮನವಿ ಮಾಡಲಾಗಿದೆ.ಆದಷ್ಟು ಕೂಡಲೇ ಹುಲಿಯನ್ನು ಸೆರೆ ಹಿಡಿಯುವಂತೆ ಈ ಭಾಗದ ಗ್ರಾಮಸ್ಥರು ಆಗ್ರಹಿಸಿದ್ದಾರೆ.
