ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಜೊತೆ ವಿಲೀನಕ್ಕೆ ಕರ್ನಾಟಕ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯ ಸರ್ಕಾರಗಳ ಪರವಾನಿಗೆ ಬೇಕು, ಈ ಪ್ರಕ್ರಿಯೆ ನಡೆಯುತ್ತಿವೆ, ಶೀಘ್ರ ವಿಲೀನ ಕಾರ್ಯಾರೂಪಕ್ಕೆ ಬರಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಆಶಿಸಿದ್ದಾರೆ.
ಉಡುಪಿ ; ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಜೊತೆ ವಿಲೀನಕ್ಕೆ ಕರ್ನಾಟಕ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯ ಸರ್ಕಾರಗಳ ಪರವಾನಿಗೆ ಬೇಕು, ಈ ಪ್ರಕ್ರಿಯೆ ನಡೆಯುತ್ತಿವೆ, ಶೀಘ್ರ ವಿಲೀನ ಕಾರ್ಯಾರೂಪಕ್ಕೆ ಬರಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಆಶಿಸಿದ್ದಾರೆ.
ಶುಕ್ರವಾರ ಮಂಗಳೂರಿನಿಂದ ಉಡುಪಿ ರೈಲ್ವೆ ನಿಲ್ದಾಣಕ್ಕೆ ರೈಲಿನಲ್ಲಿ ಆಗಮಿಸಿ, ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಉಡುಪಿ ರೈಲ್ವೆ ನಿಲ್ದಾಣ ಕರಾವಳಿ ಭಾಗದ ಪ್ರಮುಖ ರೈಲ್ವೆ ನಿಲ್ದಾಣವಾಗಿದೆ, ಉಡುಪಿ ಧಾರ್ಮಿಕ ಮತ್ತು ಶೈಕ್ಷಣಿಕ ಕೇಂದ್ರಗಳಾಗಿವೆ, ಇದನ್ನು ಗಮನದಲ್ಲಿಟ್ಟುಕೊಂಡು ಈ ರೈಲ್ವೆ ನಿಲ್ದಾಣವನ್ನು ಸ್ಥಳೀಯ ವಾಸ್ತು ಪರಂಪರೆಗನುಗುಣವಾಗಿ ಮೇಲ್ದರ್ಜೆಗೇರಿಸಿ, ಅದರ ಸಾಮರ್ಥ್ಯ ಹೆಚ್ಚಿಸಲಾಗುತ್ತದೆ ಎಂದರು. ದಕ್ಷಿಣ ಭಾರತದಾದ್ಯಂತದಿಂದ ಕೊಲ್ಲೂರಿಗೆ ಪ್ರವಾಸಿಗರು ಆಗಮಿಸುವುದರಿಂದ ಬೈಂದೂರು ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿಗೊಳಿಸುವ ಬಗ್ಗೆ ಚಿಂತನೆ ಇದೆ, ಜೊತೆಗೆ ಈ ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚರಿಸುವುದರಿಂದ ಈ ಪ್ರಯಾಣಿಕರಿಗೆ ಹೆಚ್ಚಿನ ಲಾಭವಾಗಲಿದೆ ಎಂದವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಸಿಂಗಲ್ ಕೋಚ್ನಲ್ಲಿ ಬಂದ ಸಚಿವರು: ಇದಕ್ಕೆ ಮೊದಲು ಸಚಿವ ಅಶ್ವಿನಿ ವೈಷ್ಣವ್ ಅವರು ಮಂಗಳೂರು ಸಂಸದ ಕ್ಯಾ.ಬ್ರಿಜೆಶ್ ಚೌಟ ಜೊತೆ ರೈಲ್ವೆಯ ಮೈಸೂರು ವಿಭಾಗದ ವಿಶೇಷ ಐಸಿಎಫ್ ಸಿಂಗಲ್ ಕೋಚ್ ನಲ್ಲಿ ಮಂಗಳೂರಿನಿಂದ ಉಡುಪಿಗೆ ಆಗಮಿಸಿದರು. ಅವರನ್ನು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್ ಪಾಲ್ ಸುವರ್ಣ, ಕಿರಣ್ ಕೊಡ್ಗಿ, ಗುರುರಾಜ ಗಂಟಿಹೊಳೆ ಮತ್ತಿತರ ಗಣ್ಯರು ಸ್ವಾಗತಿಸಿದರು.
