ಸಾರಾಂಶ
ಕನ್ನಡಪ್ರಭ ವಾರ್ತೆ, ಕೊಪ್ಪ
ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಗದಾಪ್ರಹಾರ ನಡೆಸುತ್ತಿರುವ ಕೇಂದ್ರ ಸರ್ಕಾರವನ್ನು ವಜಾ ಗೊಳಿಸಲು ಒತ್ತಾಯಿಸಿ ತಾಲೂಕು ಯುವ ಕಾಂಗ್ರೆಸ್ ಮತ್ತು ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳು ಬುಧವಾರ ಕೊಪ್ಪ ತಾಲೂಕು ತಹಸೀಲ್ದಾರ್ ಮುಖೇನ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಅಗತ್ಯವಸ್ತುಗಳ ಬೆಲೆ ಏರಿಕೆ ಮಾಡುತ್ತಾ ಜನಸಾಮಾನ್ಯರ ಮೇಲೆ ಅಧಿಕ ತೆರಿಗೆ ಹೊರೆ ಹೊರಿಸುತ್ತಿದೆ. ಇದರಿಂದ ಜನಸಾಮಾನ್ಯರ ಜೀವನ ದಿನದಿಂದ ದಿನಕ್ಕೆ ದುಸ್ತರವಾಗುತ್ತಿದೆ. ಇದೀಗ ಕೇಂದ್ರ ಸರ್ಕಾರ ಮತ್ತೆ ಪೆಟ್ರೋಲ್-ಡಿಸೇಲ್ ಮೇಲೆ ಲೀಟರ್‌ಗೆ ೨ರು. ಅಬಕಾರಿ ಶುಲ್ಕ ಹೆಚ್ಚಿಸಿದೆ. ಎಲ್ ಪಿಜಿ ಸಿಲಿಂಡರ್ ಬೆಲೆ ₹೫೦ ರು. ಹೆಚ್ಚಿಸಿದೆ. ಸಿಎನ್ ಜಿ ದರವನ್ನೂ ಪ್ರತಿ ಕೆಜಿಗೆ ೧ರು. ಹೆಚ್ಚಿಸಿದೆ. ಇದರಿಂದ ಇತರ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗಲಿದೆ ಎಂದು ಆರೋಪಿಸಿದರು.ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಮತ್ತು ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಸುವಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವನ್ನು ಕೊಪ್ಪ ಬ್ಲಾಕ್ ಯುವ ಕಾಂಗ್ರೆಸ್ ಬಲವಾಗಿ ಖಂಡಿಸುತ್ತದೆ. ಈ ಬೆಲೆ ಏರಿಕೆ ಈಗಾಗಲೇ ಹಣದುಬ್ಬರ ಮತ್ತು ನಿರುದ್ಯೋಗದಿಂದ ಬಳಲುತ್ತಿರುವ ಸಾಮಾನ್ಯ ಜನರು, ರೈತರು, ದಿನಗೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ಭಾರಿ ಹೊರೆಯಾಗಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದಲೂ ಉದ್ಯೋಗ ಸೃಷ್ಟಿ ಮಾಡುದನ್ನಾಗಲೀ, ಜನಸಾಮಾನ್ಯರ ಜೀವನ ಸರಳ ಗೊಳಿಸುವ ಕೆಲಸವಾಗಲೀ ಮಾಡುತ್ತಿಲ್ಲ. ಬದಲಿಗೆ ಜನರಿಂದ ಮಿತಿಮೀರಿ ತೆರಿಗೆ ವಸೂಲು ಮಾಡುವ ಮೂಲಕ ಜನರ ಸುಲಿಗೆ ಮಾಡಲು ಹೊರಟಿದೆ. ಗೌರವಾನ್ವಿತ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನಿರ್ಧಾರ ಹಿಂಪಡೆಯುವಂತೆ ನಿರ್ದೇಶನ ನೀಡಬೇಕು. ಇಲ್ಲವೇ ಜನವಿರೋಧಿ ಕೇಂದ್ರ ಸರ್ಕಾರವನ್ನು ಕಿತ್ತೊಗೆಯಬೇಕೆಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಕೊಪ್ಪ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಜಯಾನಂದ ಸಿ., ತಾಲೂಕು ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ತಯೀಬ್, ಉಪಾಧ್ಯಕ್ಷ ಸುನಿಲ್ ಭಂಡಿಗಡಿ ಜಿಲ್ಲಾಧ್ಯಕ್ಷ ಶ್ರೀಜಿತ್ ದಂಡಿನಮಕ್ಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜೇಶ್, ಮುಖಂಡರಾದ ನವೀನ್ ಕರುವಾನೆ, ರಾಶ್ವಿಕ್ ಭಂಡಾರಿ, ಗುರುನಂದನ್ ಶೇಟ್, ರಚಿನ್, ಸಂತೋಷ ಕುಲಾಸೋ, ಜೇಸುದಾಸ್ ಮಹೇಂದ್ರ, ಸುಹಾಸ್, ನಾಗೇಂದ್ರ ಮುಂತಾದವರು ಮನವಿ ನೀಡುವ ಸಂದರ್ಭದಲ್ಲಿ ಇದ್ದರು.
;Resize=(128,128))
;Resize=(128,128))
;Resize=(128,128))