ಸೋಮರಡ್ಡಿ ಅಳವಂಡಿ ಕೊಪ್ಪಳಜಿಲ್ಲೆಯಲ್ಲಿ ಪಿಯು ಫಲಿತಾಂಶ ಪ್ರಕಟವಾಗಿದ್ದು, ಕಳೆದ ವರ್ಷ 23ನೇ ಸ್ಥಾನದಲ್ಲಿದ್ದ ಕೊಪ್ಪಳ ಈ ವರ್ಷ 17ನೇ ಸ್ಥಾನಕ್ಕೆ ಜಿಗಿದಿರುವುದು ಅಲ್ಲದೆ ಕಲ್ಯಾಣ ಕರ್ನಾಟಕದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ.

ಕಳೆದ ವರ್ಷ ಕೇವಲ 67.02 ರಷ್ಟು ವಿದ್ಯಾರ್ಥಿಗಳು ಮಾತ್ರ ತೇರ್ಗಡೆಯಾಗಿದ್ದರು. ಆದರೆ,ಈ ವರ್ಷ 86.80 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿರುವುದು ಗಮನಾರ್ಹ ಸಾಧನೆಯಾಗಿದೆ.

ಪ್ರಸಕ್ತ ವರ್ಷ ಪಿಯುಸಿಗೆ ಪ್ರೆಶ್‌(ಹೊಸ) ವಿದ್ಯಾರ್ಥಿಗಳು 13312 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ,ಇದರಲ್ಲಿ 11555 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.86.80ರಷ್ಟು ಫಲಿತಾಂಶ ಪಡೆದಿದ್ದಾರೆ.ಹಳೆಯ ವಿದ್ಯಾರ್ಥಿಗಳನ್ನು ಸೇರಿಸಿಕೊಂಡರೇ ಶೇ.78.62 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಬಾಲಕೀಯರೇ ಮೇಲುಗೈ: ಪ್ರತಿ ವರ್ಷದಂತೆ ಈ ವರ್ಷವೂ ಸಹ ಪಿಯು ಫಲಿತಾಂಶದಲ್ಲಿ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ವಿದ್ಯಾರ್ಥಿನಿಯರು ಶೇ. 81.59 ರಷ್ಟು ತೇರ್ಗಡಾಗಿದ್ದರೇ ವಿದ್ಯಾರ್ಥಿಗಳು ಶೇ.74.22 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಕಲಾ ವಿಭಾಗದಲ್ಲಿ ಶೇ.78 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೇ ವಾಣಿಜ್ಯ ವಿಭಾಗದಲ್ಲಿ ಶೇ. 90.39 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.ಇನ್ನು ವಿಜ್ಞಾನ ವಿಭಾಗದಲ್ಲಿ ಶೇ.92.72 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.


ಗ್ರಾಮೀಣ ಪ್ರದೇಶದವರೇ ಮೈಲುಗೈ: ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಹೋಲಿಕೆ ಮಾಡಿದರೇ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ನಗರ ಪ್ರದೇಶದ ವಿದ್ಯಾರ್ಥಿಗಳು ಶೇ.84.64 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೇ ಗ್ರಾಮೀಣ ಪ್ರದೇಶದ 89.99 ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಕನ್ನಡ ಮಾಧ್ಯಮದವರೆ ಹೆಚ್ಚು ಫೇಲ್: ಆಂಗ್ಲಮಾಧ್ಯಮಕ್ಕೆ ಹೋಲಿಕೆ ಮಾಡಿದರೇ ಕನ್ನಡ ಮಾಧ್ಯಮದವರೇ ಹೆಚ್ಚು ಫೇಲಾಗಿದ್ದಾರೆ.ಆಂಗ್ಲಮಾಧ್ಯಮದಲ್ಲಿ ಪರೀಕ್ಷೆಗೆ ಹಾಜರಾದವರ ಪೈಕಿ ಶೇ.ಕಡಾ 88.68 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೇ ಕನ್ನಡ ಮಾಧ್ಯಮದಲ್ಲಿ ಕೇವಲ 66.08 ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಕಲ್ಯಾಣ ಕರ್ನಾಟಕ ಪಿಯು ಫಲಿತಾಂಶ

ಜಿಲ್ಲೆ ಶೇಕಡಾ ಫಲಿತಾಂಶ

ಕೊಪ್ಪಳ - 86.80

ಬೀದರ - 84.61

ಬಳ್ಳಾರಿ – 78.69

ಕಲಬುರಗಿ – 76.97

ರಾಯಚೂರು – 74.09

ಯಾದಗಿರಿ - 71.21

ಫಲಿತಾಂಶ ಸುಧಾರಣೆಯಲ್ಲಿ ಪ್ರಾಚಾರ್ಯರು ಮತ್ತು ಉಪನ್ಯಾಸಕರು ಶಕ್ತಿಮೀರಿ ಶ್ರಮಿಸಿದ್ದಾರೆ.ಈ ಕಾರಣಕ್ಕಾಗಿಯೇ ಕಲ್ಯಾಣ ಕರ್ನಾಟಕದಲ್ಲಿಯೇ ಪ್ರಥಮ ಸ್ಥಾನ ಮತ್ತು ರಾಜ್ಯದ ಸರ್ಕಾರಿಗಿಂತಲೂ ಉತ್ತಮ ಫಲಿತಾಂಶ ಬಂದಿದೆ. ಕಳದೆ ವರ್ಷ 23 ನೇ ಸ್ಥಾನದಲ್ಲಿರುವುದು. ಈ ವರ್ಷ 17ನೇ ಸ್ಥಾನಕ್ಕೆ ಜಂಪ್ ಮಾಡಿದೆ. ಗೈರು ಹಾಜರಾಗುವ ವಿದ್ಯಾರ್ಥಿಗಳ ಮೇಲೆ ನಿಗಾ ಮತ್ತು ಆನ್ ಲೈನ್ ಕ್ಲಾಸ್ ಮೂಲಕ ವಿದ್ಯಾರ್ಥಿಗಳಿಗೆ ನಿರಂತರ ಪಾಠದಿಂದ ಫಲಿತಾಂಶ ಸುಧಾರಣೆಯಾಲು ಸಾಧ್ಯವಾಗಿದೆ ಎಂದು ಡಿಡಿಪಿಯು ಜಗದೀಶ ತಿಳಿಸಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೇ ಕೊಪ್ಪಳ ಪಿಯು ಫಲಿತಾಂಶದಲ್ಲಿ ಭಾರಿ ಸುಧಾರಣೆಯಾಗಿರುವುದು ಸಂತೋಷದ ಸಂಗತಿಯಾಗಿದೆ. ಅದರಲ್ಲೂ ಕಲ್ಯಾಣ ಕರ್ನಾಟದಲ್ಲಿ ಪ್ರಥಮ ಸ್ಥಾನ ಪಡೆದಿದೆ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ತಿಳಿಸಿದ್ದಾರೆ.