ಮನೆ ಮನೆಗೂ ಕೇಂದ್ರ ಸರ್ಕಾರದ ಯೋಜನೆ ತಲುಪಿಸಲು ಕೊಪ್ಪಳ ಸಂಸದ ಕರಡಿ ಸಂಗಣ್ಣ ಕರೆ

| Published : Jan 19 2024, 01:46 AM IST

ಮನೆ ಮನೆಗೂ ಕೇಂದ್ರ ಸರ್ಕಾರದ ಯೋಜನೆ ತಲುಪಿಸಲು ಕೊಪ್ಪಳ ಸಂಸದ ಕರಡಿ ಸಂಗಣ್ಣ ಕರೆ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಸರ್ಕಾರದ ಯೋಜನೆಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಇದಾಗಿದೆ. ದೇಶದ ಎಲ್ಲ ನಾಗರಿಕರಿಗೂ ಹಲವು ಕಾರ್ಯಕ್ರಮಗಳನ್ನು ನೀಡಬೇಕೆನ್ನುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮುಖ್ಯ ಉದ್ದೇಶ ಹೊಂದಿದೆ.

ಕೊಪ್ಪಳ: ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮೂಲಕ ಪ್ರತಿ ಮನೆ ಮನೆಗಳಿಗೆ ಕೇಂದ್ರ ಸರ್ಕಾರದ ಯೋಜನೆಗಳು ತಲುಪಲಿವೆ ಎಂದು ಕೊಪ್ಪಳ ಸಂಸದ ಕರಡಿ ಸಂಗಣ್ಣ ಹೇಳಿದರು.ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕೊಪ್ಪಳ ನಗರಸಭೆ, ಬ್ಯಾಂಕ್ ಆಫ್ ಬರೋಡಾ ಸಹಯೋಗದಲ್ಲಿ ನಗರದ ಬಸವೇಶ್ವರ ಸರ್ಕಲ್ ಹತ್ತಿರ ಹಮ್ಮಿಕೊಂಡಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಹಲವಾರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕೇಂದ್ರ ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಯವರೆಗೂ ತಲುಪುವಂತೆ ಮಾಡುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಉದ್ದೇಶವಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಇದಾಗಿದೆ. ದೇಶದ ಎಲ್ಲ ನಾಗರಿಕರಿಗೂ ಹಲವು ಕಾರ್ಯಕ್ರಮಗಳನ್ನು ನೀಡಬೇಕೆನ್ನುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮುಖ್ಯ ಉದ್ದೇಶ ಹೊಂದಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೆಕು ಎಂದು ಹೇಳಿದರು.ವಿಧಾನ ಪರಿಷತ್ ಸದಸ್ಯ ಹೇಮಲತಾ ನಾಯಕ ಮಾತನಾಡಿ, ಕೇಂದ್ರ ಸರ್ಕಾರವು ಹಲವಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗಳನ್ನು ಜನಸಾಮಾನ್ಯರು ಇನ್ನು ಹೆಚ್ಚು ಸದುಪಯೋಗಪಡೆದುಕೊಳ್ಳಬೇಕು. ಎಲ್ಲ ಅರ್ಹ ಜನರಿಗೆ ಸೌಲಭ್ಯಗಳು ಸಿಗಬೇಕು. ವಿಕಸಿತ ಭಾರತ ಸಂಕಲ್ಪ ಯಾತ್ರೆ ಭಾರತ ದೇಶವನ್ನು ವಿಕಸಿತ ಭಾರತವನ್ನಾಗಿಸುವ ಪ್ರಧಾನಿ ಕನಸು ನನಸಾಗಿಸುವಲ್ಲಿ ನಾವೆಲ್ಲರೂ ಕೈ ಜೋಡಿಸಿ, ಸಾರ್ವಜನಿಕರಿಗೆ ಅರಿವು ಮೂಡಿಸೋಣ ಎಂದರು.ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ವಿದ್ಯಾ ಎಸ್. ಹೆಸರೂರು ಹಾಗೂ ಉಮಾದೇವಿ ಪಾಟೀಲ, ಲೀಡ್ ಬ್ಯಾಕ್ ವ್ಯವಸ್ಥಾಪಕ ವೀರೇಂದ್ರಕುಮಾರ, ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ, ಗಣ್ಯರಾದ ವಾಣಿಶ್ರೀ ಮಠದ್, ವಿಜಯಲಕ್ಷ್ಮೀ, ಮಂಜುಳಾ ಕರಡಿ, ಸುನೀಲ್ ಹೆಸರೂರು, ಶಿವು ಅಕೇರಿ, ಕಳಕಪ್ಪ ಜಾಧವ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.ಪ್ರತಿಜ್ಞೆ ಸ್ವೀಕಾರ: ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದ ಅಂಗವಾಗಿ ವಿಕಸಿತ ಭಾರತ ಸಂಕಲ್ಪ ಪ್ರತಿಜ್ಞೆ ಸ್ವೀಕರಿಸಲಾಯಿತು. ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ಕಾರ್ಯಕ್ರಮದಲ್ಲಿ ಟಿ-ಶರ್ಟ್ ವಿತರಣೆ ಮಾಡಲಾಯಿತು.