ಸಾರಾಂಶ
ತೆರವಾಗಿದ್ದ ಕೊಪ್ಪಳ ನಗರಸಭೆಯ 11, 8ನೇ ವಾರ್ಡ್‌ನ ಸದಸ್ಯ ಸ್ಥಾನದ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು, ಸೋಮವಾರ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಅಭ್ಯರ್ಥಿಗಳನ್ನು ಅಖಾಡಕ್ಕೆ ಇಳಿಸಲಾಗಿದೆ.
ಬಿಜೆಪಿಗೆ ಗುಡ್ ಬೈ ಹೇಳಿದ ರಾಜಶೇಖರ ಆಡೂರು ಕಾಂಗ್ರೆಸ್‌ನಿಂದ ಅಖಾಡಕ್ಕೆ ಕನ್ನಡಪ್ರಭ ವಾರ್ತೆ ಕೊಪ್ಪಳ
ತೆರವಾಗಿದ್ದ ಕೊಪ್ಪಳ ನಗರಸಭೆಯ 11, 8ನೇ ವಾರ್ಡ್‌ನ ಸದಸ್ಯ ಸ್ಥಾನದ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು, ಸೋಮವಾರ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಅಭ್ಯರ್ಥಿಗಳನ್ನು ಅಖಾಡಕ್ಕೆ ಇಳಿಸಲಾಗಿದೆ.11ನೇ ವಾರ್ಡ್:
ನಗರಸಭೆಯ 11ನೇ ವಾರ್ಡ್ ಸದಸ್ಯರಾಗಿದ್ದ ರಾಜಶೇಖರ ಆಡೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಗುಡ್ ಬೈ ಹೇಳಿ, ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಈ ವೇಳೆ ತಮ್ಮ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮತ್ತೆ ಸ್ಪರ್ಧೆ ಮಾಡಲ್ಲ ಎಂದು ಘೋಷಣೆ ಮಾಡಿದ್ದರು. ಆದರೆ, ಈಗ ತೆರವಾದ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದು, ಈ ಬಾರಿ ಕಾಂಗ್ರೆಸ್‌ನಿಂದ ರಾಜಶೇಖರ ಆಡೂರು ಸ್ಪರ್ಧೆ ಬಯಸಿ, ನಾಮಪತ್ರ ಸಲ್ಲಿಸಿದ್ದಾರೆ.ಬಿಜೆಪಿಯಿಂದ ಚನ್ನಬಸಪ್ಪ ಗಾಳಿ ಅಖಾಡಕ್ಕೆ ಇಳಿದಿದ್ದಾರೆ.
8ನೇ ವಾರ್ಡ್:8ನೇ ವಾರ್ಡ್‌ನಲ್ಲಿ ಸದಸ್ಯರಾಗಿದ್ದ ಕಾಂಗ್ರೆಸ್‌ನ ಸುನಿತಾ ಗಾಳಿ ಹಾಸ್ಟೆಲ್ ವಾರ್ಡನ್ ಆಗಿ ನೇಮಕವಾಗಿದ್ದರಿಂದ ರಾಜೀನಾಮೆ ನೀಡಿದ್ದರಿಂದ ಸ್ಥಾನ ತೆರವಾಗಿತ್ತು. ಈಗ ಇಲ್ಲಿ ಕಾಂಗ್ರೆಸ್ ಪಕ್ಷದಿಂದ ರೇಣುಕಾ ಕಲಾಕ್ಷಪ್ಪ ಪೂಜಾರ ಸ್ಪರ್ಧೆ ಮಾಡಿದ್ದರೇ ಬಿಜೆಪಿಯಿಂದ ಕಳೆದ ಬಾರಿ ಪರಾಭವಗೊಂಡಿದ್ದ ಕವಿತಾ ಬಸವರಾಜ ಗಾಳಿ ಮತ್ತೆ ಅಖಾಡಕ್ಕೆ ಇಳಿದು, ಅದೃಷ್ಟ ಪರೀಕ್ಷೆ ಮುಂದಾಗಿದ್ದಾರೆ.
ತಲಾ ಒಂದು ಸ್ಥಾನ:ಕೊಪ್ಪಳ ನಗರಸಭೆಯಲ್ಲಿ ತೆರವಾಗಿರುವ ಎರಡು ಸ್ಥಾನಗಳ ಪೈಕಿ ಕಾಂಗ್ರೆಸ್ ಒಂದು ಮತ್ತು ಬಿಜೆಪಿ ಒಂದು ಸದಸ್ಯ ಸ್ಥಾನ ಇತ್ತು. ಈಗ ಯಾರಿಗೆ ಹೆಚ್ಚಿನ ಲಾಭವಾಗಲಿದೆ ಎನ್ನುವುದು ಸದ್ಯದ ಕುತೂಹಲವಾಗಿದೆ.
ನಾಮತ್ರ ಸಲ್ಲಿಕೆ:ಬಿಜೆಪಿ ನಾಮಪತ್ರ ಸಲ್ಲಿಕೆಯ ವೇಳೆ ವಿಪ ಸದಸ್ಯೆ ಹೇಮಲತಾ ನಾಯಕ, ಪ್ರಮುಖರಾದ ಡಾ. ಬಸವರಾಜ, ಪ್ರದೀಪ ಹಿಟ್ನಾಳ, ದೇವರಾಜ ಹಾಲಸಮುದ್ರ, ನೀಲಕಂಠಯ್ಯ ಹಿರೇಮಠ ಇದ್ದರು.
ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ನಗರಸಭೆ ಅಧ್ಯಕ್ಷ ಅಮ್ಜಾದ್ ಪಟೇಲ್, ಬ್ಲಾಕ್ ಕಾಂಗ್ರೆಸ್ ನಗರಘಟಕದ ಅಧ್ಯಕ್ಷ ಕಾಟನ್ ಪಾಶಾ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣ ಇಟ್ಟಂಗಿ ಇದ್ದರು.