ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳನ್ನು ರಾಜ್ಯ ಸರ್ಕಾರದ ವತಿಯಿಂದ ಸೋಮವಾರ ಅಧಿಕೃತವಾಗಿ ಆಹ್ವಾನಿಸಲಾಯಿತು.

ಕೊಪ್ಪಳ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳನ್ನು ರಾಜ್ಯ ಸರ್ಕಾರದ ವತಿಯಿಂದ ಸೋಮವಾರ ಅಧಿಕೃತವಾಗಿ ಆಹ್ವಾನಿಸಲಾಯಿತು.

ಕೊಪ್ಪಳ ನಗರದ ಗವಿಮಠಕ್ಕೆ ಸೋಮವಾರ ಭೇಟಿ

ಕೊಪ್ಪಳ ನಗರದ ಗವಿಮಠಕ್ಕೆ ಸೋಮವಾರ ಭೇಟಿ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಸಂಸದ-ಶಾಸಕ ಹಿಟ್ನಾಳ್, ವಿಪ ಸದಸ್ಯ ಬಾದರ್ಲಿ ನೇತೃತ್ವದ ನಿಯೋಗ, ಗವಿಶ್ರೀಗಳನ್ನು ಭೇಟಿಯಾಗಿ ಸರ್ಕಾರದ ಅಧಿಕೃತ ಆಹ್ವಾನ ಪತ್ರವನ್ನು ನೀಡಿ ದಸರಾ ಮಹೋತ್ಸವಕ್ಕೆ ಆಹ್ವಾನಿಸಿತು. ಅ.11ರಂದು ನಡೆಯಲಿರುವ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭ ಮಾತ್ರವಲ್ಲದೆ ದಸರಾ ಅಂಗವಾಗಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲೂ ಪಾಲ್ಗೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು.

ಸರ್ಕಾರದ ಅಧಿಕೃತ ಆಹ್ವಾನವನ್ನು ಸ್ವೀಕರಿಸಿದ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳು

ಸರ್ಕಾರದ ಅಧಿಕೃತ ಆಹ್ವಾನವನ್ನು ಸ್ವೀಕರಿಸಿದ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳು, ಅ.11ರಂದು ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುವುದಾಗಿ ತಿಳಿಸಿದರು. ಈ ವೇಳೆ ಗವಿಮಠದ ಭಕ್ತರು, ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಶಿವರಾಜ ತಂಗಡಗಿ, ಮೈಸೂರು ದಸರಾವನ್ನು ಅತ್ಯಂತ ವೈಭವ ಹಾಗೂ ಸಂಭ್ರಮದಿಂದ ಆಚರಿಸಲು ಸರ್ಕಾರ ಸಿದ್ಧತೆ ನಡೆಸಿದೆ. ನಾಡಿನ ಪ್ರತಿಷ್ಠಿತ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಗವಿಶ್ರೀಗಳು ಒಪ್ಪಿಕೊಂಡಿರುವುದು ಸಂತಸ ತಂದಿದೆ. ಕೊಪ್ಪಳದ ಗವಿಮಠದ ಶ್ರೀಗಳು ಮೈಸೂರು ದಸರಾ ಉದ್ಘಾಟಿಸುತ್ತಿರುವುದು ನಮ್ಮ ಭಾಗದ ಜನತೆಗೆ ಹೆಮ್ಮೆಯ ಸಂಗತಿ. ಇದರಿಂದ ಕೊಪ್ಪಳದ ಹಿರಿಮೆ ಮತ್ತಷ್ಟು ಹೆಚ್ಚಿದೆ ಎಂದು ಹೇಳಿದರು.