ಸಾರಾಂಶ
ತುಂಗಭದ್ರಾ ಅಣೆಕಟ್ಟು ಚೈನ್ ಲಿಂಕ್ ತುಂಡಾದ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಶುಕ್ರವಾರ ರಾತ್ರಿ ಮೊದಲ ಎಲಿಮೆಂಟ್ ಕೂರಿಸಲಾಯಿತು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದರು.
ಹೊಸಪೇಟೆ : ತುಂಗಭದ್ರಾ ಅಣೆಕಟ್ಟು ಚೈನ್ ಲಿಂಕ್ ತುಂಡಾದ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಶುಕ್ರವಾರ ರಾತ್ರಿ ಮೊದಲ ಎಲಿಮೆಂಟ್ ಕೂರಿಸಲಾಯಿತು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದರು.
ಒಟ್ಟು ಐದು ಎಲಿಮೆಂಟ್ ಅಳವಡಿಕೆಯಾಗಲಿದ್ದು, ಶನಿವಾರದ ವೇಳೆಗೆ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಸಿಎಂಗೆ ಮಾಹಿತಿ ನೀಡಿದರು.
ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ವೈಕುಂಠ ಅತಿಥಿ ಗೃಹದಲ್ಲೇ ವಾಸ್ತವ್ಯ ಹೂಡಿದ್ದ ಸಚಿವ ಜಮೀರ್ ಅಹಮದ್ ಖಾನ್ ದಿನಕ್ಕೆ ಎರಡು ಬಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು. ತಾಂತ್ರಿಕ ತಂಡದ ನಿರಂತರ ಪರಿಶ್ರಮದಿಂದ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಮೊದಲ ಹಂತದ ಯಶಸ್ಸು ಸಾಧಿಸಿದ್ದು, ಇಡೀ ತಂಡಕ್ಕೆ ಸಚಿವರು ಕೃತಜ್ಞತೆ ಸಲ್ಲಿಸಿದರು.
ಸಚಿವ ಶಿವರಾಜ್ ತಂಗಡಗಿ, ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ್, ಶಾಸಕರಾದ ಗವಿಯಪ್ಪ, ಜೆ.ಎನ್. ಗಣೇಶ್ ಇದ್ದರು.