ನವಲಿ ಆರೋಗ್ಯ ಕೇಂದ್ರಕ್ಕೆ ವೈದ್ಯರ ಕೊರತೆನವಲಿ ಹೋಬಳಿಯಲ್ಲಿ ಇರುವ ಏಕೈಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ಒಂದೇ ಒಂದು ಆ್ಯಂಬುಲೆನ್ಸ್ ನೀಡಿಲ್ಲ. ಅಪಘಾತ, ಹೆರಿಗೆ ಹಾಗೂ ತುರ್ತು ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಿಂದ ಕರೆದುಕೊಂಡು ಬರಲು ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಅಥವಾ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಆ್ಯಂಬುಲೆನ್ಸ್ ಇಲ್ಲದೆ ರೋಗಿಗಳು ಸಂಕಷ್ಟ ಎದುರಿಸುತ್ತಿದ್ದಾರೆ.