ಪುಷ್ಟಿ ಯೋಜನೆ ಆಯ್ಕೆಯಲ್ಲಿ ತಾರತಮ್ಯ, ಪ್ರತಿಭಟನೆಗ್ರಾಮಸ್ಥರು, ಶಿಕ್ಷಣ ಪ್ರೇಮಿಗಳು ಶಾಲೆಗೆ ಅಗತ್ಯ ಮೂಲ ಸೌಕರ್ಯ ನೀಡಿದ್ದಾರೆ. ಕಲಿಕೆಗೆ ಉತ್ತಮ ವಾತಾವರಣ, ಗುಣಮಟ್ಟದ ಶಿಕ್ಷಣ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳಿವೆ. ಆದರೂ ಪ್ರಶಸ್ತಿ ಆಯ್ಕೆಯಲ್ಲಿ ಅನ್ಯಾಯವಾಗಿದೆ ಎಂದು ಮುಕ್ಕಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.