ಮಳೆ-ಬಿರುಗಾಳಿಗೆ 10 ಸಾವಿರ ಹೆಕ್ಟೇರ್ ಬೆಳೆ ಹಾನಿ, ಸಿಡಿಲಿಗೆ ಇಬ್ಬರು ಬಲಿಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲೂಕು ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆಯಿಂದಾಗಿ ಕಟಾವಿಗೆ ಬಂದಿದ್ದ 8ರಿಂದ 9 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ನೆಲಕಚ್ಚಿದ್ದು, ಒಂದು ಕಾಳು ಸಹ ಸಿಗದಂತಾಗಿದೆ. ಇದು ಪ್ರಾಥಮಿಕ ಮಾಹಿತಿಯಾಗಿದ್ದು, ಹಾನಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.