ಸದಾಶಿವ ಆಯೋಗದ ಒಳಮೀಸಲಾತಿ ವರದಿ ಜಾರಿಗೆ ಆಗ್ರಹಬೆಳಗಾವಿ ಅಧಿವೇಶನದಲ್ಲಿ ಸುಪ್ರೀಂಕೋರ್ಟಿನ ತೀರ್ಪುನ್ನು ಗೌರವಿಸಿ ಕಾಲಹರಣ ಮಾಡದೆ ನ್ಯಾ. ಎ.ಜೆ. ಸದಾಶಿವ ಆಯೋಗದ ಒಳಮೀಸಲಾತಿ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಶನಿವಾರ ಮಾದಿಗ, ಛಲವಾದಿ ಉಪಜಾತಿ ಸಂಘಟನೆಗಳ ಮುಖಂಡರು ಪಟ್ಟಣದ ಶಾಸಕ ಬಸವರಾಜ ರಾಯರಡ್ಡಿಯವರ ಕಚೇರಿ ಮುಂದೆ ತಮಟೆ ಬಾರಿಸುವ ಮೂಲಕ ಪ್ರತಿಭಟನೆ ನಡೆಸಿದರು.