ಹನುಮದ್ ವ್ರತ: ಅಂಜನಾದ್ರಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಂಗಾವತಿ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಅಂಜನಾದ್ರಿ ಬೆಟ್ಟದಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹನುಮದ್ ವ್ರತಾಚರಣೆ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಬೆಳಗ್ಗೆ ಸ್ವಾಮಿಗೆ ಪಂಚಾಮೃತಾಭಿಷೇಕ, ಹೂವಿನ ಅಲಂಕಾರ ಮಾಡಲಾಗಿತ್ತು. ಆನಂತರ ದೇಗುಲದ ಮುಂಭಾಗದಲ್ಲಿ ಪವಮಾನ ಹೋಮ, ಹನುಮಾನ್ ಚಾಲೀಸ್ ಪಠಣ, ಭಜನೆ, ಸಂಗೀತ ಕಾರ್ಯಕ್ರಮಗಳು ಜರುಗಿದವು.