ಶಾಲಾ ಶಿಕ್ಷಕರ ನೇಮಕಾತಿ: ಸಂಖ್ಯೆ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆಕಲ್ಯಾಣ ಕರ್ನಾಟಕ ಭಾಗದಲ್ಲಿ ಪದವೀಧರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ) ಜಿಲ್ಲಾ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿತು.