ರಾಘವೇಂದ್ರಸ್ವಾಮಿಗಳ ಆರಾಧನೆ, ಅದ್ಧೂರಿ ರಥೋತ್ಸವರಾಘವೇಂದ್ರಸ್ವಾಮಿಗಳ ಆರಾಧನೆ ನಿಮಿತ್ತ ಮೂರು ದಿನಗಳಿಂದ ಬೆಳಗಿನ ಜಾವದಿಂದಲೇ ಸುಪ್ರಭಾತ, ಅಷ್ಟೋತ್ತರ, ಪಂಚಾಮೃತ ಅಭಿಷೇಕ, ನೈವೇದ್ಯ, ಹಸ್ತೋದಕ, ತೀರ್ಥಪ್ರಸಾದ ಸೇರಿದಂತೆ ಅನೇಕ ಕಾರ್ಯಕ್ರಮ ಜರುಗಿದವು. ಮಧ್ಯಾಹ್ನ ಸುರಿದ ಮಳೆ ನಡುವೆಯೂ ಸಾಕಷ್ಟು ಸಂಖ್ಯೆಯಲ್ಲಿ ಜನ ಪ್ರಸಾದ ಸೇವಿಸಿದರು.