ನೆಕ್ಕಂಟಿ ನಾಗರಾಜ ನನಗೆ ಆತ್ಮೀಯ, ತಂಗಡಗಿಗೆ ಸ್ನೇಹಿತ: ಬಸವರಾಜ ದಢೇಸೂಗುರುವಾಲ್ಮೀಕಿ ನಿಗಮದ ಅಕ್ರಮದಲ್ಲಿ ಕೇವಲ ಸಚಿವರು ಮತ್ತು ಅಧಿಕಾರಿಗಳು ಮಾತ್ರ ಭಾಗಿಯಾಗಿದ್ದಾರೆ ಎಂದರೆ ಸರಿಯಲ್ಲ. ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ. ಅವರ ಅನುಮತಿ ಇಲ್ಲದೆ ಅಷ್ಟೊಂದು ದೊಡ್ಡ ಮೊತ್ತದ ಹಣ ವರ್ಗಾವಣೆಯಾಗಲು ಸಾಧ್ಯವೇ ಇಲ್ಲ ಎಂದು ಕನಕಗಿರಿಯ ಮಾಜಿ ಶಾಸಕ ಬಸವರಾಜ ದಢೇಸೂಗೂರು ಹೇಳಿದ್ದಾರೆ.