ಪವರ್ ಗ್ರಿಡ್‌ಗೆ ಭೂಸ್ವಾಧೀನ ಕೈ ಬಿಡಲು ಒತ್ತಾಯಿಸಿ ಪ್ರತಿಭಟನೆಜಿಲ್ಲೆಯ ಯಲಬುರ್ಗಾ ತಾಲೂಕಿನ ಲಕಮನಗುಳೆ ಗ್ರಾಮದ ಫಲವತ್ತಾದ ಜಮೀನುಗಳಲ್ಲಿ ಪವರ್ ಗ್ರಿಡ್ ಸ್ಟೇಷನ್‌ಗೆ ಭೂಸ್ವಾಧೀನ ಮಾಡಿಕೊಳ್ಳುವುದನ್ನು ಕೈ ಬಿಡಲು ಒತ್ತಾಯಿಸಿ ಕೊಪ್ಪಳ ಜಿಲ್ಲಾ ಆಡಳಿತ ಭವನದ ಎದುರು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ವಿವಿಧ ಸಂಘಟನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿ ಹಾಗೂ ಭೂ ಸ್ವಾಧೀನಾಧಿಕಾರಿಗಳಿಗೆ ಸಹಾಯಕ ಆಯುಕ್ತರ ಕಚೇರಿಯ ಗ್ರೇಡ್-2 ತಹಸೀಲ್ದಾರ್ ಮುಖಾಂತರ ಮನವಿ ಸಲ್ಲಿಸಿದರು.