ಪೊಲೀಸರೊಂದಿಗೆ ವಾಗ್ವಾದ, ರೈತ ಮುಖಂಡನ ಬಂಧನವಿದ್ಯುತ್ ಕಂಬ ಅಳವಡಿಸುವ ಕಂಪನಿಯಿಂದ ಪರಿಹಾರ ನೀಡಿಕೆಯಲ್ಲಿ ತಾರತಮ್ಯವಾಗಿದೆ ಎಂದು ಆರೋಪಿಸಿ ಯಲಬುರ್ಗಾ ತಾಲೂಕಿನ ಕೋಳಿಹಾಳ ಗ್ರಾಮದಲ್ಲಿ ರೈತರು ಹೋರಾಟ ನಡೆಸುತ್ತಿದ್ದು, ಶನಿವಾರ ಹೋರಾಟಗಾರರು ಹಾಗೂ ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಪೊಲೀಸರು ರೈತ ಮುಖಂಡ ಗುಂಗಾಡಿ ಶರಣಪ್ಪ ಅವರನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.