ಶಿಕ್ಷಕರ ಕೈಯಲ್ಲಿ ಥಾಪೆ, ಬುಟ್ಟಿ!ಶಾಲಾ ಕಾಂಪೌಂಡ್ ಚಿಕ್ಕದಾಗಿದ್ದರಿಂದ ಪುಂಡರ ಹಾವಳಿ ಹೆಚ್ಚಾಗಿತ್ತು. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೂ ತೊಂದರೆಯಾಗಿತ್ತು. ಆದರೆ, ಕಾಂಪೌಂಡ್ ಎತ್ತರಿಸಲು ಅನುದಾನ ಇರಲಿಲ್ಲ. ಈ ಕುರಿತು ಶಾಲೆಯ ಹಳೆ ವಿದ್ಯಾರ್ಥಿಗಳು, ಶಿಕ್ಷಕರು, ಗ್ರಾಮಸ್ಥರು ಚರ್ಚಿಸಿ ತಾವೇ ಹಣ ಹೊಂದಿಸಿ ಕಾಮಗಾರಿ ಆರಂಭಿಸಿದ್ದರು.