ಸರ್ವಜ್ಞ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಎಸಿ ಮಹೇಶ್ ಮಾಲಗಿತ್ತಿಜಿಲ್ಲಾಡಳಿತದಿಂದ ಸರ್ವಜ್ಞ ಜಯಂತಿಯನ್ನು ಫೆ.24ರಂದು ಜಿಲ್ಲಾ ಕೇಂದ್ರದಲ್ಲಿ ಏರ್ಪಡಿಸಲಾಗಿದೆ. ವೇದಿಕೆ ಕಾರ್ಯಕ್ರಮ, ವಿಶೇಷ ಉಪನ್ಯಾಸ ನಡೆಯಲಿವೆ. ಶಿಷ್ಟಾಚಾರದಂತೆ ಕಾರ್ಯಕ್ರಮ ಆಯೋಜನೆ, ಆಮಂತ್ರಣ ಪತ್ರಿಕೆ, ವೇದಿಕೆ ಬ್ಯಾನರ್, ಭಾವಚಿತ್ರ, ಹೂವಿನ ಹಾರ, ಪೂಜಾ ಸಾಮಗ್ರಿಗಳ ವ್ಯವಸ್ಥೆ ಜತೆಗೆ ಮೆರವಣಿಗೆ ಸಂಬಂಧಿಸಿದಂತೆ ಅಗತ್ಯ ವ್ಯವಸ್ಥೆ ಒದಗಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.