ಸಂಭ್ರಮದ ಕೊಪ್ಪಳದ ಗವಿಸಿದ್ದೇಶ್ವರ ಮಠದ ಲಘು ರಥೋತ್ಸವಶನಿವಾರ ನಡೆಯಲಿರುವ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ಮಹಾರಥೋತ್ಸವವು ನಿರ್ವಿಘ್ನವಾಗಿ ಸಾಗಲಿ ಎನ್ನುವ ಉದ್ದೇಶದಿಂದ ಪ್ರತಿವರ್ಷ ಈ ಲಘು ರಥೋತ್ಸವ ಉಚ್ಛಾಯ ಎಳೆಯಲಾಗುತ್ತದೆ. ಈ ವೇಳೆ ಆಕರ್ಷಕ ನಂದಿಕೋಲು, ಪಂಜು, ಇಲಾಲುಗಳು, ವಾದ್ಯಗಳು, ಲಘು ರಥೋತ್ಸವಕ್ಕೆ ಮೆರಗು ತಂದು ಕೊಟ್ಟವು. ಭಕ್ತರು ಉತ್ತತ್ತಿ ಎಸೆದು ಭಕ್ತಿ ಮೆರೆದರು.