ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣದುಂದುವೆಚ್ಚದ ಮದುವೆಗಳಿಂದ ಬಹಳಷ್ಟು ಕುಟುಂಬಗಳು ಸಾಲದ ಸುಳಿಯಲ್ಲಿ ಸಿಲುಕಿವೆ. ಅನೇಕ ಕುಟುಂಬಗಳು ಸಾಲ ಮಾಡಿ ಮಕ್ಕಳ ಮದುವೆ ಮಾಡಿ ಗೋವಾ, ಮಂಗಳೂರು, ಬೆಂಗಳೂರು, ಶಿವಮೊಗ್ಗ, ದಾಂಡೇಲಿ ಸೇರಿ ವಿವಿಧೆಡೆ ಊರು ಬಿಟ್ಟು ಗೂಳೆ ಹೋಗುವುದನ್ನು ನಮ್ಮಲ್ಲಿ ಕಾಣುತ್ತಿದ್ದೇವೆ. ಬಡವರು ಸಾಲ ಮಾಡಿ ಮಕ್ಕಳ ಮದುವೆಯನ್ನು ಅದ್ಧೂರಿಯಾಗಿ ಮಾಡುವ ಬದಲು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾಡಬೇಕು.