ಗಂಗಾವತಿಯಲ್ಲಿ ಇಂದು ಗಣೇಶ ವಿಸರ್ಜನೆ, 1200 ಪೊಲೀಸರ ನಿಯೋಜನೆಶಾಸಕ ಬಸನಗೌಡ ಪಾಟೀಲ ಯತ್ನಾಳ ಭಾಷಣ ಮತ್ತು ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈಗಾಗಲೇ ನಗರದಲ್ಲಿ ಜಿಲ್ಲಾ ಪೊಲೀಸ್ ಪಡೆ ಸೇರಿದಂತೆ ಬಳ್ಳಾರಿ, ವಿಜಯನಗರ, ರಾಯಚೂರು ಜಿಲ್ಲೆಗಳಿಂದ ಅಧಿಕಾರಿಗಳು ಸೇರಿದಂತೆ 1200ಕ್ಕೂ ಪೊಲೀಸರನ್ನು ನಿಯೋಜಿಸಲಾಗಿದೆ.