ಹೆತ್ತವರ ಕೀರ್ತಿಗೆ ಮಕ್ಕಳು ಪಾತ್ರರಾಗಿ: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳಬಾಲ್ಯ ವಿವಾಹ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಕಾಣೆ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಂಡು ಬಾಲ್ಯ ವಿವಾಹ, ಬಾಲಕಾರ್ಮಿಕರು ಹಾಗೂ ಮಕ್ಕಳ ಕಾಣೆ ಪ್ರಕರಣ ಕಂಡು ಬಂದರೇ ಯಾವ ಮುಲಾಜಿಯಿಲ್ಲದೆ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು