ನವಲಿಗೆ ಆಗಮಿಸಿದ ಕನ್ನಡಜ್ಯೋತಿ ರಥಯಾತ್ರೆಕರ್ನಾಟಕ ಸಂಭ್ರಮ 50 ಕನ್ನಡ ಜ್ಯೋತಿ ರಥಯಾತ್ರೆಯು ನವಲಿ ಗ್ರಾಮದ ಬುದ್ಧ ಸರ್ಕಲ್ ಹತ್ತಿರ ಆಗಮಿಸಿದ ಹಿನ್ನೆಲೆಯಲ್ಲಿ ತಾಪಂ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ರಥಯಾತ್ರೆಯಲ್ಲಿರುವ ನಾಡದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಈ ಮೂಲಕ ಕನ್ನಡಜ್ಯೋತಿ ರಥಯಾತ್ರೆಯನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.ನಾಡು, ನುಡಿ, ಸಾಹಿತ್ಯ ಪರಂಪರೆ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಕರ್ನಾಟಕ ಸಂಭ್ರಮ-50ರ ಹೆಸರಾಯಿತು ಕರ್ನಾಟಕ ಉಸಿಗಾಗಲಿ ಕನ್ನಡ ಎಂಬ ಧ್ಯೇಯವಾಕ್ಯದೊಂದಿಗೆ ವರ್ಷವಿಡೀ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಾಂಸ್ಕೃತಿಕ ಹಾಗೂ ನುಡಿಗೆ ಸಂಬಂಧಿಸಿದಂತೆ ಮತ್ತು ಯುವ ಜನತೆಯಲ್ಲಿ ಕರ್ನಾಟಕದ ಅರಿವು ಮೂಡಿಸುವ ಉದ್ದೇಶ ಹೊಂದಿದೆ ಎಂದರು.