ಮನೆ-ಮನೆಗೆ ಪೊಲೀಸ್ ಬೀಟ್ ಸಂಚಾರಗೃಹ ಇಲಾಖೆಯು ರಾಜ್ಯದ ಎಲ್ಲ ಜಿಲ್ಲೆಗಳು ಸೇರಿದಂತೆ ತಾಲೂಕು ವ್ಯಾಪ್ತಿಯಲ್ಲಿ ಬರುವ ನಗರ, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮನೆ-ಮನೆಗೆ ಬೀಟ್ ಸಂಚಾರಕ್ಕೆ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲೆಯ ಆಯಾ ಪೊಲೀಸ್ ಠಾಣೆಯಲ್ಲಿ ವಿನೂತನ ಪರಿಕಲ್ಪನೆಯ ಮೂಲಕ ಗ್ರಾಮಗಳಿಗೆ ತೆರಳಿ ಗ್ರಾಮಸ್ಥರ ಸಮಸ್ಯೆಗಳ ಆಲಿಸುವಂತೆ ಸೂಚನೆ ನೀಡಿದೆ.