ಎಸ್ಎಸ್ಎಲ್ಸಿ ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಿ: ಜಿಲ್ಲಾಧಿಕಾರಿಪರೀಕ್ಷೆಯಲ್ಲಿ ಅಕ್ರಮ ಚಟುವಟಿಕೆಗೆ ಅವಕಾಶ ನೀಡದಂತೆ ಕಟ್ಟುನಿಟ್ಟಾಗಿ ನಡೆಸಬೇಕು. ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ, ವಿಕಲಚೇತನ ವಿದ್ಯಾರ್ಥಿಗಳಿಗೆ ನೆಲಮಹಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ, ಅಂಧ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಹಾಗೂ ಬರವಣಿಗೆ ಸಹಾಯಕರ ಒಪ್ಪಿಗೆ ಪತ್ರ ಪರಿಶೀಲಿಸಬೇಕು.