ನನೆಗುದಿಗೆ ಬಿದ್ದ ನೀರಾವರಿ ಯೋಜನೆಗಳಿಗೆ ಸಿಕ್ಕೀತೆ ಆದ್ಯತೆ?ರಾಜ್ಯ ಸರ್ಕಾರ ಪ್ರಸಕ್ತ ಸಾಲಿನ ಬಜೆಟ್ ಫೆ. 16ರಂದು ಮಂಡಿಸಲಿದ್ದು, ಜಿಲ್ಲೆಯಲ್ಲಿ ಹಲವಾರು ನಿರೀಕ್ಷೆಗಳು ಹುಟ್ಟಿವೆ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವ ರಾಜ್ಯ ಸರ್ಕಾರ ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಸಿಕ್ಕಿತೆ ಎನ್ನುವುದೇ ಈಗಿರುವ ದೊಡ್ಡ ನಿರೀಕ್ಷೆ.