ನರೇಗಾ ನೌಕರರಿಗೆ ಸೇವಾ ಭದ್ರತೆ ಒದಗಿಸಿರಾಜ್ಯದಲ್ಲಿ 5000ಕ್ಕೂ ಹೆಚ್ಚು ನೌಕರರಿಗೆ ಕಳೆದ 6 ತಿಂಗಳಿಂದ ವೇತನ ಪಾವತಿಸಿಲ್ಲ. ಇದರಿಂದ ನೌಕರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕುಟುಂಬ ನಿರ್ವಹಣೆ, ದಿನಸಿ ಖರೀದಿ, ಮಕ್ಕಳ ಶಾಲಾ ಪ್ರವೇಶಾತಿ, ಕುಟುಂಬದ ಸದಸ್ಯರ ವೈದ್ಯಕೀಯ ವೆಚ್ಚ, ಪ್ರಯಾಣ ವೆಚ್ಚ, ಸಾಲಗಳ ಮರುಪಾವತಿ, ಇಎಂಐ ಸೇರಿ ಅನೇಕ ರೀತಿಯ ಖರ್ಚು-ವೆಚ್ಚ ನಿಭಾಯಿಸಲು ತೀವ್ರ ತೊಂದರೆಯುಂಟಾಗುತ್ತಿದೆ.