ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠತೆಗೆ ಮತದಾರರಿಗೆ ಜಾಗೃತಿ ಅಗತ್ಯಶೈಕ್ಷಣಿಕ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾಕ್ಷರತಾ ಮತದಾರರ ಸಂಘಗಳ ಮಹತ್ವಗಳ ಕುರಿತು ಜಾಗೃತಿ ಮೂಡಿಸುವುದು, ಯುವಜನತೆಗೆ ಚುನಾವಣಾ ಗುರುತಿನ ಚೀಟಿಯ ಮಹತ್ವ, ವಿಎಚ್‌ಎ ಆ್ಯಪ್ ಬಳಕೆ, ಮತದಾನದ ಪ್ರತಿಜ್ಞಾವಿಧಿ ಸ್ವೀಕಾರ, ದೇಶದಲ್ಲಿ ಜರುಗುವ ಯಾವುದೇ ಚುನಾವಣೆಗಳಲ್ಲಿ ಮತದಾರರು ತಮ್ಮ ಹಕ್ಕನ್ನು ತಪ್ಪದೇ ಚಲಾಯಿಸುವಂತೆ ಅರಿವು ಕಾರ್ಯಕ್ರಮಗಳನ್ನು ಹೆಚ್ಚು ಹಮ್ಮಿಕೊಂಡಷ್ಟು ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತ ಬಲಿಷ್ಠಗೊಳ್ಳುತ್ತದೆ.