ರಾಜ್ಯದಲ್ಲಿರುವ ಎಸ್‌ಡಿಪಿಐ, ಪಿಎಫ್ಐ ಸಂಘಟನೆಗಳ ಮೇಲಿನ ಪ್ರಕರಣ ವಾಪಸ್ ಪಡೆಯುತ್ತಾರೆ. ಅದೇ ಹಿಂದೂ ಸಂಘಟನೆಗಳ ಪ್ರಕರಣಗಳನ್ನು ರೀಓಪನ್ ಮಾಡಿಸುತ್ತಾರೆ. ಇದೆಂತ ಸರ್ಕಾರ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಕಿಡಿ ಕಾರಿದ್ದಾರೆ.
ಅಯೋಧ್ಯೆಯಿಂದ ಬಂದ ಮಂತ್ರಾಕ್ಷತೆ ಕಲಶವನ್ನು ಮನೆ ಮನೆಗೆ ತಲುಪಿಸುವ ಅಭಿಯಾನಕ್ಕೆ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕ ಅಯ್ಯನಗೌಡರೆಡ್ಡಿ ಅಳ್ಳಳ್ಳಿ ಚಾಲನೆ ನೀಡಿದರು.
ಹಿಂದೂಗಳನ್ನು ವಿರೋಧ ಮಾಡುವುದು ಕಾಂಗ್ರೆಸ್ ಪಕ್ಷದ ಡಿಎನ್‌ಎಯಲ್ಲಿಯೇ ಇದೆ. ಅವರು ಯಾವಾಗಲೂ ಹಿಂದೂಗಳ ಮೇಲೆ ಸೇಡು ತೀರಿಸಿಕೊಳ್ಳುವುದು, ಬೆದರಿಸುವುದನ್ನು ಮಾಡುತ್ತಾ ಬಂದಿದ್ದಾರೆ. ಇಂಥದ್ದಕ್ಕೆಲ್ಲ ನಾವು ಬೆದರಲ್ಲ ಮತ್ತು ಬಗ್ಗಲ್ಲ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಕಿಡಿಕಾರಿದರು.
ಅಂಜನಾದ್ರಿಯ ಸನಿಹದ ಸಣಾಪುರ ಸಮತೋಲನ ಜಲಾಶಯದಲ್ಲಿ ಅಕ್ರಮ ತೆಪ್ಪಗಳನ್ನು ಹಾಕುತ್ತಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಗ್ರಾಪಂ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 25 ತೆಪ್ಪಗಳನ್ನು ಜಪ್ತಿ ಮಾಡಿದ್ದಾರೆ.
ಮಕ್ಕಳ ಹಕ್ಕುಗಳ ರಕ್ಷಣೆಗೆ ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.
ರಾಜ್ಯದಲ್ಲಿ ಗೋಧ್ರಾ ಮಾದರಿ ಪ್ರಕರಣ ನಡೆಯುವ ಸಾಧ್ಯತೆ ಇದೆ ಎಂದು ಹೇಳಿರುವ ಕಾಂಗ್ರೆಸ್ ಪಕ್ಷದ ಮುಖಂಡ ಬಿ.ಕೆ. ಹರಿಪ್ರಸಾದ ಅವರನ್ನು ಕೂಡಲೇ ವಿಚಾರಣೆಗೆ ಒಳಪಡಿಸಿ, ಮಾಹಿತಿ ಪಡೆಯಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ.