• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳ್ಳಿಯಲ್ಲಿ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ
ಸಮರ್ಪಕವಾಗಿ ಮಳೆ ಬಾರದೇ ಇರುವುದರಿಂದ ಮುಂಬರುವ ದಿನಗಳಲ್ಲಿ ಹಳ್ಳಿಗಳಲ್ಲಿ ಕುಡಿಯುವ ನೀರು, ದನಕರುಗಳಿಗೆ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ನೋಡಲ್ ಅಧಿಕಾರಿಗಳು, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ಕೆ.ವಿ. ಕಾವ್ಯರಾಣಿ ಹೇಳಿದರು. ಪಟ್ಟಣದ ವಿಶೇಷ ಎಪಿಎಂಸಿಯ ಸಭಾಂಗಣದಲ್ಲಿ ಬುಧವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮಳೆಯಾಗಿದೆ. ಸಕಾಲದಲ್ಲಿ ಸರಿಯಾದ ಮಳೆಯಾಗಿದ್ದರೆ ನೀರಿನ ಸಮಸ್ಯೆಯಾಗುತ್ತಿರಲಿಲ್ಲ. ಸರ್ಕಾರ ಈಗಾಗಲೇ ಬರ ಪೀಡಿತ ತಾಲೂಕವೆಂದು ಘೋಷಿಸಿದೆ. ಅದಕ್ಕಾಗಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ನವಲಿಗೆ ಆಗಮಿಸಿದ ಕನ್ನಡಜ್ಯೋತಿ ರಥಯಾತ್ರೆ
ಕರ್ನಾಟಕ ಸಂಭ್ರಮ 50 ಕನ್ನಡ ಜ್ಯೋತಿ ರಥಯಾತ್ರೆಯು ನವಲಿ ಗ್ರಾಮದ ಬುದ್ಧ ಸರ್ಕಲ್ ಹತ್ತಿರ ಆಗಮಿಸಿದ ಹಿನ್ನೆಲೆಯಲ್ಲಿ ತಾಪಂ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ರಥಯಾತ್ರೆಯಲ್ಲಿರುವ ನಾಡದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಈ ಮೂಲಕ ಕನ್ನಡಜ್ಯೋತಿ ರಥಯಾತ್ರೆಯನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.ನಾಡು, ನುಡಿ, ಸಾಹಿತ್ಯ ಪರಂಪರೆ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಕರ್ನಾಟಕ ಸಂಭ್ರಮ-50ರ ಹೆಸರಾಯಿತು ಕರ್ನಾಟಕ ಉಸಿಗಾಗಲಿ ಕನ್ನಡ ಎಂಬ ಧ್ಯೇಯವಾಕ್ಯದೊಂದಿಗೆ ವರ್ಷವಿಡೀ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಾಂಸ್ಕೃತಿಕ ಹಾಗೂ ನುಡಿಗೆ ಸಂಬಂಧಿಸಿದಂತೆ ಮತ್ತು ಯುವ ಜನತೆಯಲ್ಲಿ ಕರ್ನಾಟಕದ ಅರಿವು ಮೂಡಿಸುವ ಉದ್ದೇಶ ಹೊಂದಿದೆ ಎಂದರು.
ಭಾರತದಲ್ಲಿ ಮಹಿಳಾ ಶಕ್ತಿಗಿದೆ ಮನ್ನಣೆಉಪನ್ಯಾಸಕಿ ಡಾ.ವೀಣಾ ಹೇಳಿಕೆ| ಜಾಗೃತ ಮಹಿಳಾ ಸಮಾವೇಶ
ಕನ್ನಡಪ್ರಭ ವಾರ್ತೆ ಕೊಪ್ಪಳಭಾರತದಲ್ಲಿ ಮಹಿಳಾ ಶಕ್ತಿಗಿದೆ ಮನ್ನಣೆ ಎಂದು ಉಪನ್ಯಾಸಕಿ ಡಾ.ವೀಣಾ ಹೇಳಿದರು.ನಗರದ ಶಿವಶಾಂತವೀರ ಮಂಗಲ ಭವನದಲ್ಲಿ ಜರುಗಿದ ಶಕ್ತಿ ಸಂಚಯ ಜಾಗೃತ ಮಹಿಳಾ ಸಮಾವೇಶವನ್ನೂದ್ದೇಶಿಸಿ ಮಾತನಾಡಿದ ಅವರು, ಪುರಾಣದಿಂದ ಹಿಡಿದು ಇಂದಿನವರೆಗೂ ಭಾರತದಲ್ಲಿ ಮಹಿಳೆಯರು ತಮ್ಮದೇ ಆದ ಸಾಧನೆ ಮಾಡುತ್ತಾ ಬಂದಿದ್ದಾರೆ. ಮನೆಯಲ್ಲೂ ಅವರು ಮಕ್ಕಳ ಸಂಸ್ಕಾರ ಮತ್ತು ಕುಟುಂಬ ನಿರ್ವಹಣೆಯ ಜವಾಬ್ದಾರಿ ಹೊರಬೇಕಾಗಿದೆ.
ಕನಕಗಿರಿಯಲ್ಲಿ ಕನ್ನಡ ಜ್ಯೋತಿ ಯಾತ್ರೆ ವೈಭವ
ಕನ್ನಡಪ್ರಭ ವಾರ್ತೆ ಕನಕಗಿರಿರಾಜ್ಯಕ್ಕೆ ಕರ್ನಾಟಕವೆಂದು ನಾಮಕಾರಣವಾಗಿ ೫೦ನೇ ವರ್ಷ ಸಂಭ್ರಮಾಚರಣೆ ನಿಮಿತ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ರಾಜ್ಯವ್ಯಾಪಿ ಕನ್ನಡ ಜ್ಯೋತಿ ರಥಯಾತ್ರೆ ಸಾಗುತ್ತಿದ್ದು, ಮಂಗಳವಾರ ಕನಕಗಿರಿ ಪಟ್ಟಣಕ್ಕೆ ಆಗಮಿಸಿದ ರಥಯಾತ್ರೆ ಮೆರವಣಿಗೆಯಲ್ಲಿ ಸಾವಿರಾರು ಜನರು ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ ಶ್ರೀಮಂತಗೊಳಿಸಿದ ಗಣ್ಯರನ್ನು ಸ್ಮರಿಸಲಾಯಿತು.
ಮಸಬಹಂಚಿನಾಳದಲ್ಲಿ ಮಾರುತೇಶ್ವರ ಕಾರ್ತಿಕ
ಕನ್ನಡಪ್ರಭ ವಾರ್ತೆ ಕುಕನೂರುತಾಲೂಕಿನ ಮಸಬಹಂಚಿನಾಳ ಗ್ರಾಮದ ಮಾರುತೇಶ್ವರ ಕಾರ್ತಿಕ ಮಹೋತ್ಸವ ಸೋಮವಾರ ರಾತ್ರಿ ಲಕ್ಷಕ್ಕೂ ಹೆಚ್ಚು ಭಕ್ತಾದಿಗಳಿಂದ ಸಂಪನ್ನವಾಯಿತು.ಈ ಭಾಗದ ಆರಾಧ್ಯ ದೈವ ಆಂಜನೇಯ ಸ್ವಾಮಿಗೆ ಭಕ್ತರು ಮಧ್ಯಾಹ್ನದಿಂದ ತಂಡೋಪತಂಡವಾಗಿ ಹರಿದು ಬಂದರು. ಕೆಲವರು ಪಾದ ನಡಿಗೆಯಿಂದ ಬಂದರು. ಬೆಳಗ್ಗೆಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಖಾದಿ ಗ್ರಾಮದ್ಯೋಗ ಕೇಂದ್ರ 3 ವರ್ಷದಿಂದ ಸ್ಥಗಿತ
ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದಲ್ಲಿರುವ ಖಾದಿ ಗ್ರಾಮದ್ಯೋಗ ಕೇಂದ್ರ ಸ್ಥಗಿತಗೊಂಡು ಸುಮಾರು ಮೂರು ವರ್ಷ ಗತಿಸಿದರೂ ಅದನ್ನು ಪ್ರಾರಂಭ ಮಾಡುವ ಕೆಲಸವನ್ನು ಸಹಕಾರ ಇಲಾಖೆಯ ಅಧಿಕಾರಿಗಳು ಮಾಡುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಗ್ರಾಮದ ಖಾದಿ ಗ್ರಾಮದ್ಯೋಗ ಕೇಂದ್ರವು ಸುಮಾರು ವರ್ಷಗಳಿಂದ ಮುಚ್ಚಿದ ಬಾಗಿಲು ತೆರೆದೇ ಇಲ್ಲ. ಈ ಕುರಿತು ಗಮನ ಹರಿಸಬೇಕಾದ ಅಧಿಕಾರಿಗಳು ಸಹಿತ ನಮಗೇನೂ ಸಂಬಂಧವಿಲ್ಲ ಎಂಬಂತೆ ಜಾಣ ಕುರುಡತನ ಮೆರೆಯುತ್ತಿದ್ದಾರೆ. ಇದು ಸಹಕಾರಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ಸಿಂಗಟಾಲೂರು ಏತನೀರಾವರಿ ಯೋಜನೆ: 11 ವರ್ಷದಿಂದ ನೀರು ಬಳಕೆಯಾಗದೇ ಪೋಲು
1992ರಲ್ಲಿಯೇ ಸಿಂಗಟಾಲೂರು ಏತನೀರಾವರಿ ಯೋಜನೆಗೆ ಡಿಪಿಆರ್ ಸಿದ್ಧ ಮಾಡಲಾಯಿತು. ಆದರೆ, ಆಗ ಕಾರ್ಯಗತವಾಗಲಿಲ್ಲ. ನಂತರ ಹೇಗೋ ಆಗೊಮ್ಮೆ, ಈಗೊಮ್ಮೆ ಸರ್ಕಾರದ ಇಚ್ಛಾಶಕ್ತಿಯಿಂದ 30 ವರ್ಷಗಳ ಬಳಿಕ ಯೋಜನೆ ಪೂರ್ಣಗೊಂಡು 2012ರ ನವೆಂಬರ್‌ನಲ್ಲಿ ಲೋಕಾರ್ಪಣೆಗೊಂಡಿತು. ಬಲಭಾಗದಲ್ಲಿ ಸುಮಾರು 48 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಯಿತು. ಆದರೆ, ಎಡಭಾಗದಲ್ಲಿ ಮಾತ್ರ ನೀರಾವರಿ ಇವತ್ತಿಗೂ ಆಗುತ್ತಿಲ್ಲ. ಬಲಭಾಗದಲ್ಲಿ ಹೂವಿನಹಡಗಲಿ ವ್ಯಾಪ್ತಿಯಲ್ಲಿ ಅತ್ಯುತ್ತಮವಾಗಿ ನೀರಾವರಿಯಾಗಿದೆ. ರೈತರು ಖುಷಿಯಾಗಿದ್ದಾರೆ. ಆದರೆ, ಇದೇ ಯೋಜನೆಯ ಎಡಭಾಗದಲ್ಲಿ ಸುಮಾರು 2.20 ಲಕ್ಷ ಎಕರೆ ಪ್ರದೇಶಕ್ಕೆ ನೀರು ಪೂರೈಕೆ ಮಾಡುವ ಕಾರ್ಯ ಇನ್ನು ನಡೆದಿಲ್ಲ.
ಕಾರಟಗಿ-ಕನಕಗಿರಿ ತಾಲೂಕು ಅಭಿವೃದ್ಧಿಗೆ ಬದ್ಧ
ಕಾರಟಗಿ-ಕನಕಗಿರಿ ತಾಲೂಕು ಕೇಂದ್ರದಲ್ಲಿ ವಿಳಂಬವಾಗಿರುವ ಎಲ್ಲ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಇಲ್ಲಿನ ಸರ್ಕಾರಿ ಪ್ರೌಢಶಾಲೆ ಆವರಣದ ಸಿದ್ದೇಶ್ವರ ರಂಗಮಂದಿರದಲ್ಲಿ ಜಾಗೃತ ಯುವಕ ಸಂಘ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶನಿವಾರ ರಾತ್ರಿ ಮಾತನಾಡಿದ ಅವರು, ಪಟ್ಟಣದಲ್ಲಿ ಸೂಕ್ತ ಜಾಗವನ್ನು ಹುಡುಕಿ ತಾಲೂಕು ಆಡಳಿತ ಭವನ, ಸಂಸ್ಕೃತಿ ಭವನ, ನೂರು ಹಾಸಿಗೆಗಳ ಆಸ್ಪತ್ರೆ ಹಾಗೂ ವಿವಿಧ ಕಾಮಗಾರಿಗಳನ್ನು ಪೂರೈಸುವ ಪ್ರಾಮಾಣಿಕವಾಗಿ ಈಡೇರಿಸುವದೇ ನನ್ನ ಗುರಿ. ಕಾರಟಗಿ ಪಟ್ಟಣ ವೇಗವಾಗಿ ಬೆಳಯುತ್ತಿದ್ದು, ವೇಗಕ್ಕೆ ತಕ್ಕಂತೆ ಅಭಿವೃದ್ಧಿಪಡಿಸಾಲುತ್ತದೆ ಎಂದರು.
2030ರೊಳಗೆ ಏಡ್ಸ್ ಸೋಂಕು ತೊಲಗಿಸಲು ಶಪಥ ಮಾಡೋಣ
ಎಚ್‌ಐವಿ ನಿಯಂತ್ರಣ, ಸೇವಾ ಸೌಲಭ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು, ಎಲ್ಲ ಇಲಾಖೆಗಳಿಂದ ಸಿಗುವ ಸಾಮಾಜಿಕ ಸೌಲಭ್ಯಗಳು ಸೋಂಕಿತ ಸಮುದಾಯಕ್ಕೆ ಲಭ್ಯವಾಗುವಂತೆ ಸಮಾಲೋಚನೆ ಮಾಡಿ ಸರ್ಕಾರದ ಸೇವೆಗಳಿಗೆ ಸಂಪರ್ಕ ಕಲ್ಪಿಸಲು ಅನುಕೂಲವಾಗುವಂತೆ ಪ್ರೇರೇಪಿಸುವುದು ಇಂದಿನ ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದೇವೇಂದ್ರ ಪಂಡಿತ ಹೇಳಿದರು.
ಡಯಾಲಿಸಿಸ್ ಕೇಂದ್ರ ಸ್ತಬ್ಧ, ರೋಗಿಗಳ ಪರದಾಟ
ಡಯಾಲಿಸಿಸ್ ಸಿಬ್ಬಂದಿ ಬಾಕಿ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಡಯಾಲಿಸಿಸ್ ಕೇಂದ್ರಗಳು ಸ್ತಬ್ಧವಾಗಿವೆ. ಇದರಿಂದ ರೋಗಿಗಳು ಪರಾಡುವಂತಾಗಿದೆ. ಜಿಲ್ಲಾಸ್ಪತ್ರೆಯಲ್ಲಿ 9 ಡಯಾಲಿಸಿಸ್ ಯಂತ್ರಗಳಿವೆ. ಇವುಗಳಲ್ಲಿ ನಾಲ್ಕು ಯಂತ್ರಗಳು ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಹೀಗಾಗಿ, ಇಲ್ಲಿ ಡಯಾಲಿಸಿಸ್‌ಗೆ ಬರುವ ರೋಗಿಗಳು ಪರದಾಡುತ್ತಿದ್ದಾರೆ. ಈಗ ಡಯಾಲಿಸಿಸ್ ಕೇಂದ್ರ ಬಂದ್‌ ಆಗಿರುವುದರಿಂದ ತೀವ್ರ ಸಮಸ್ಯೆಯಾಗಿದೆ. ರೋಗಿಗಳು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ.
  • < previous
  • 1
  • ...
  • 550
  • 551
  • 552
  • 553
  • 554
  • 555
  • 556
  • 557
  • 558
  • ...
  • 569
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved