• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • koppal

koppal

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಧರಣಿ
ಪಿಯು ಹಂತವನ್ನು ಪ್ರೌಢ ಶಾಲೆಯಲ್ಲಿ ವಿಲೀನಗೊಳಿಸುವುದನ್ನು ವಿರೋಧಿಸಿ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ, ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹಾಗೂ ಪದವಿ ಪೂರ್ವ ಕಾಲೇಜುಗಳ ಬೋಧಕೇತರ ಸಂಘ ಜಂಟಿಯಾಗಿ ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು. ಪಿಯು ಶಿಕ್ಷಣಕ್ಕೆ ದೇಶದಲ್ಲಿಯೇ ಅತ್ಯುತ್ತಮ ಮಾನ್ಯತೆ ಇದೆ. ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿದೆ. ಇದನ್ನು ಏಕಾಏಕಿ ಪ್ರೌಢ ಶಿಕ್ಷಣ ವ್ಯಾಪ್ತಿಗೆ ಸೇರ್ಪಡೆ ಮಾಡುವುದು ಸರಿಯಲ್ಲ. ಇದರಿಂದ ಪಿಯು ಗುಣಮಟ್ಟದ ಶಿಕ್ಷಣಕ್ಕೆ ಸಮಸ್ಯೆಯಾಗುತ್ತದೆ. ಕೂಡಲೇ ಇದನ್ನು ಹಿಂಪಡೆಯಬೇಕು.
ವಾಹನಗಳ ವಾಯುಮಾಲಿನ್ಯ ತಪಾಸಣೆ ಮಾಡಿಸಿ-ಜಿಲ್ಲಾಧಿಕಾರಿ ನಳಿನ್
ವಾಹನ ಮಾಲೀಕರು ಪ್ರತಿ ಆರು ತಿಂಗಳಿಗೊಮ್ಮೆ ವಾಹನಗಳ ವಾಯುಮಾಲಿನ್ಯ ತಪಾಸಣೆ ಮಾಡಿಸಿ, ವಾಹನದಿಂದ ವಾಯುಮಾಲಿನ್ಯ ಆಗುತ್ತಿಲ್ಲ ಎಂಬುದರ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಳಿನ್ ಅತುಲ್ ಹೇಳಿದರು. ಪ್ರತಿ 6 ತಿಂಗಳಿಗೊಮ್ಮೆ ವಾಯುಮಾಲಿನ್ಯ ತಪಾಸಣಾ ಕೇಂದ್ರಗಳಲ್ಲಿ ತಮ್ಮ ವಾಹನ ತಪಾಸಣೆಗೊಳಪಡಿಸಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ ಎಂಬ ಪ್ರಮಾಣಪತ್ರ ಪಡೆಯಬೇಕು. ಕಲಬೆರಕೆ ಇಂಧನ ಉಪಯೋಗಿಸಬಾರದು. ಕಪ್ಪು ಮತ್ತು ದಟ್ಟವಾದ ಹೊಗೆ ಬರುತ್ತಿದ್ದರೆ ತಕ್ಷಣ ಅಧಿಕೃತ ಮಾರಾಟಗಾರರು ಅಥವಾ ಸರ್ವೀಸಿಂಗ್ ಸೆಂಟರ್‌ಗಳಲ್ಲಿ ದುರಸ್ತಿ ಮಾಡಿಸಬೇಕು ಎಂದರು.
ಡಿಸೆಂಬರ್ 15ರಿಂದ ಸಿಂಧನೂರ ಹುಬ್ಬಳ್ಳಿ ರೈಲು ಸಂಚಾರ-ಕರಡಿ ಸಂಗಣ್ಣ
ಗಿಣಿಗೇರಾ ಮೆಹಬೂಬ್‍ನಗರ ರೈಲ್ವೆ ಲೈನ್ ಕಾಮಗಾರಿ ಸಿಂಧನೂರುವರೆಗೆ ಪೂರ್ಣಗೊಂಡಿದೆ. ಡಿ.15ಕ್ಕೆ ಸಿಂಧನೂರಿಗೆ ರೈಲು ಸಂಚಾರ ಮತ್ತು ಗದಗ ವಾಡಿ ಮಾರ್ಗದಲ್ಲಿ ಕುಷ್ಟಗಿ ಪಟ್ಟಣಕ್ಕೆ ಜನೇವರಿಯಲ್ಲಿ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅಧಿಕಾರಾವಧಿಯಲ್ಲಿ ಕೊಪ್ಪಳ ಲೋಕಸಭೆ ಕ್ಷೇತ್ರಕ್ಕೆ ಹತ್ತಾರು ರೀತಿಯ ರೈಲು ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಕಿಷ್ಕಿಂಧೆ ಪ್ರದೇಶವಾಗಿರುವ ಗಂಗಾವತಿಯಿಂದ ಅಯೋಧ್ಯೆವರೆಗೂ ನೇರ ರೈಲು ಸಂಚಾರ ಪ್ರಾರಂಭವಾಗುವ ವಿಶ್ವಾಸವಿದೆ ಎಂದು ಸಂಸದರು ಹೇಳಿದರು.
ಒಂದೇ ಬೆಂಚಿನಲ್ಲಿ ಐವರು ವಿದ್ಯಾರ್ಥಿಗಳು
ದೋಟಿಹಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರತಿ ದಿನ ಅನುಭವಿಸುತ್ತಿರುವ ಪರಿಸ್ಥಿತಿ. ಇಲ್ಲಿ 8ರಿಂದ 10ನೇ ತರಗತಿವರೆಗೂ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, 340 ಬಾಲಕರು, 336 ಬಾಲಕಿಯರು ಸೇರಿದಂತೆ ಒಟ್ಟು 676 ವಿದ್ಯಾರ್ಥಿಗಳು ಈ ಸಮಸ್ಯೆ ಎದುರಿಸುತ್ತಿದ್ದಾರೆ. ಕಳೆದ ವರ್ಷ ಕೆಕೆಆರ್‌ಡಿಬಿ ಅನುದಾನದಲ್ಲಿ ಮಾಜಿ ಶಾಸಕ ಅಮರೇಗೌಡ ಪಾಟೀಲ ಭಯ್ಯಾಪುರ ಸುಮಾರು ಎಂಟು ಶಾಲಾ ಕೊಠಡಿಗಳನ್ನು ಮಂಜೂರು ಮಾಡಿಸಿದ್ದರು. ಅದರಲ್ಲಿ ಆರು ಕೊಠಡಿಗಳ ಶೇ.90 ಕಾಮಗಾರಿ ಮುಗಿದಿದೆ. ಎಲೆಕ್ಟ್ರಿಕಲ್‌ ಸೇರಿದಂತೆ ಸಣ್ಣಪುಟ್ಟ ಕೆಲಸ ಬಾಕಿ ಇದ್ದು, ಗುತ್ತಿಗೆದಾರರು ಪೂರ್ಣ ಮುಗಿಸಿ ಉದ್ಘಾಟನೆ ಮಾಡಿಕೊಟ್ಟರೆ ಆರು ಕೊಠಡಿಗಳನ್ನು ಉಪಯೋಗ ಮಾಡಿಕೊಳ್ಳಲು ಅನೂಕೂಲವಾಗುತ್ತದೆ ಎನ್ನುತ್ತಾರೆ ಶಿಕ್ಷಕರು.
ನನಗೆ ಜೀವ ಭಯವಿದೆ: ಶಂಭುಲಿಂಗನಗೌಡ
ಕನ್ನಡಪ್ರಭ ವಾರ್ತೆ ಕೊಪ್ಪಳನನ್ನ ಕಾರು ಕಳ್ಳತನವಾಗಿದ್ದು, ಈ ಕುರಿತು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ. ಮನೆ ಮುಂದಿನ ಕಾರು ಕದ್ದು ಒಯ್ದವರು ನನ್ನ ಜೀವಕ್ಕೆ ಅಪಾಯ ತಂದೊಡ್ಡುವ ಸಾಧ್ಯತೆ ಇದೆ. ಹೀಗಾಗಿ, ನನಗೆ ಜೀವ ಭಯವಿದೆ ಎಂದು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್ ಹಲಿಗೇರಿ ಹೇಳಿದರು.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ತಮ್ಮ ಅಳಲು ತೊಡಿಕೊಂಡರು.
23 ರಿಂದ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಹೋರಾಟ
ಕೊಪ್ಪಳ:ಸೇವಾ ಕಾಯಮಾತಿಗೆ ಆಗ್ರಹಿಸಿ ನ.23 ರಿಂದ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಹೋರಾಟ ಆರಂಭಗೊಳ್ಳಲಿದೆ ಎಂದು ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ. ವೀರಣ್ಣ ಸಜ್ಜನರ ತಿಳಿಸಿದರು.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ನಡೆದ ಅತಿಥಿ ಉಪನ್ಯಾಸಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.2021ರ ಹೋರಾಟಕ್ಕೆ ಮಣಿದ ಅಂದಿನ ಸರ್ಕಾರ ಗೌರವಧನ ಹೆಚ್ಚಿಸಿದ್ದು ಇತಿಹಾಸ. ಅಂದಿನ ಹೋರಾಟದಲ್ಲಿ ಕೊಪ್ಪಳ ಜಿಲ್ಲೆ ಮುಂಚೂಣಿಯಲ್ಲಿತ್ತು.
ಬಹಿಷ್ಕಾರದಿಂದ ಕಾಡಸಿದ್ದರ ಕುಟುಂಬಕ್ಕೆ ಮುಕ್ತಿ
ಜಮೀನು ಹಕ್ಕಿಗಾಗಿ ನ್ಯಾಯಾಲಯದ ಮೆಟ್ಟಿಲು ಏರಿದ್ದರು ಎನ್ನುವ ಕಾರಣಕ್ಕಾಗಿ ಬಹಿಷ್ಕಾರಕ್ಕೆ ತುತ್ತಾಗಿದ್ದ ಡೊಕ್ಕಣ್ಣವರ ಎನ್ನುವ 45 ಕುಟುಂಬಗಳಿಗೆ ಬಹಿಷ್ಕಾರದಿಂದ ಮುಕ್ತಿ ನೀಡಲಾಗಿದೆ. ಕುಲಪಂಚಾಯಿತಿಯಲ್ಲಿ ನಡೆದ ರಾಜಿ ಪಂಚಾಯಿತಿಯಲ್ಲಿ ಈ ಕುರಿತು ತೀರ್ಮಾನ ಮಾಡಿ, ಪರಸ್ಪರ ಹಸ್ತಲಾಘವ ಮಾಡುವ ಮೂಲಕ ಹಾಗೂ ಮುಚ್ಚಳಿಕೆ ಪತ್ರ ಬರೆಯುವ ಮೂಲಕ ಒಂದೂವರೆ ವರ್ಷಗಳಿಂದ ಇದ್ದ ವಿವಾದ ಇತ್ಯರ್ಥ ಮಾಡಲಾಗಿದೆ ಮತ್ತು ಬಹಿಷ್ಕಾರಕ್ಕೆ ಇತಿಶ್ರೀ ಹಾಡಲಾಗಿದೆ.
ವಿಶ್ವಕಪ್ ಫೈನಲ್ ಪಂದ್ಯ, ಒಂದೂಗೂಡಿ ನೋಡುವ ಸಂಭ್ರಮ
ದೊಡ್ಡ ಪರದೆ ಮೇಲೆ ಪ್ರಸಾರವಾದ ವಿಶ್ವಕಪ್ ಫೈನಲ್ ಪಂದ್ಯ, ಇದನ್ನು ವೀಕ್ಷಿಸಲು ಸೇರಿದ ಸಾವಿರಾರು ಅಭಿಮಾನಿಗಳ ಸಂಭ್ರಮವೇ ಸಂಭ್ರಮ. ಇದು, ಕೊಪ್ಪಳ ನಗರದ ತಾಲೂಕು ಕ್ರೀಡಾಂಗಣದಲ್ಲಿ ಕಂಡುಬಂದ ದೃಶ್ಯ. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾಡಳಿತ ಜಂಟಿಯಾಗಿ ಇದೇ ಮೊದಲ ಬಾರಿಗೆ ಕೊಪ್ಪಳ ತಾಲೂಕು ಕ್ರೀಡಾಂಗಣದಲ್ಲಿ ವಿಶ್ವಕಪ್ ಪಂದ್ಯವನ್ನು ದೊಡ್ಡ ಪರದೆ ಮೇಲೆ ವೀಕ್ಷಣೆ ಮಾಡುವ ವ್ಯವಸ್ಥೆ ಮಾಡಿದೆ.ಆಸನ ವ್ಯವಸ್ಥೆ, ದೊಡ್ಡ ಪರದೆ ಮೇಲೆ ಪ್ರಸಾರ ಹಾಗೂ ಅತ್ಯುತ್ತಮ ಸೌಂಡ್ ಸಿಸ್ಟಮ್‌ನಲ್ಲಿ ಕೇಳಿ ಬರುತ್ತಿರುವ ಕನ್ನಡ ವೀಕ್ಷಕ ವಿವರಣೆ ವ್ಯವಸ್ಥೆ ಇದ್ದುದರಿಂದ ಮನೆಯಲ್ಲಿ ಟಿವಿ ನೋಡುವುದನ್ನು ಬಿಟ್ಟು, ಸಾವಿರಾರು ಅಭಿಮಾನಿಗಳು ಜಮಾಯಿಸಿ, ಸಂಭ್ರಮದಿಂದ ಕ್ರಿಕೆಟ್ ವೀಕ್ಷಣೆ ಮಾಡುತ್ತಿರುವುದು ಕಂಡು ಬಂದಿತು.
ವಿಶ್ವಕಪ್ ಫೈನಲ್ ಪಂದ್ಯ, ಒಂದೂಗೂಡಿ ನೋಡುವ ಸಂಭ್ರಮ
ದೊಡ್ಡ ಪರದೆ ಮೇಲೆ ಪ್ರಸಾರವಾದ ವಿಶ್ವಕಪ್ ಫೈನಲ್ ಪಂದ್ಯ, ಇದನ್ನು ವೀಕ್ಷಿಸಲು ಸೇರಿದ ಸಾವಿರಾರು ಅಭಿಮಾನಿಗಳ ಸಂಭ್ರಮವೇ ಸಂಭ್ರಮ. ಇದು, ಕೊಪ್ಪಳ ನಗರದ ತಾಲೂಕು ಕ್ರೀಡಾಂಗಣದಲ್ಲಿ ಕಂಡುಬಂದ ದೃಶ್ಯ. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾಡಳಿತ ಜಂಟಿಯಾಗಿ ಇದೇ ಮೊದಲ ಬಾರಿಗೆ ಕೊಪ್ಪಳ ತಾಲೂಕು ಕ್ರೀಡಾಂಗಣದಲ್ಲಿ ವಿಶ್ವಕಪ್ ಪಂದ್ಯವನ್ನು ದೊಡ್ಡ ಪರದೆ ಮೇಲೆ ವೀಕ್ಷಣೆ ಮಾಡುವ ವ್ಯವಸ್ಥೆ ಮಾಡಿದೆ.ಆಸನ ವ್ಯವಸ್ಥೆ, ದೊಡ್ಡ ಪರದೆ ಮೇಲೆ ಪ್ರಸಾರ ಹಾಗೂ ಅತ್ಯುತ್ತಮ ಸೌಂಡ್ ಸಿಸ್ಟಮ್‌ನಲ್ಲಿ ಕೇಳಿ ಬರುತ್ತಿರುವ ಕನ್ನಡ ವೀಕ್ಷಕ ವಿವರಣೆ ವ್ಯವಸ್ಥೆ ಇದ್ದುದರಿಂದ ಮನೆಯಲ್ಲಿ ಟಿವಿ ನೋಡುವುದನ್ನು ಬಿಟ್ಟು, ಸಾವಿರಾರು ಅಭಿಮಾನಿಗಳು ಜಮಾಯಿಸಿ, ಸಂಭ್ರಮದಿಂದ ಕ್ರಿಕೆಟ್ ವೀಕ್ಷಣೆ ಮಾಡುತ್ತಿರುವುದು ಕಂಡು ಬಂದಿತು.
ಸಂಗತಿಗಳು ಭೂತದಂತೆ ಕಾಡಿದಾಗ ಕವಿತೆ ಉದಯಿಸುತ್ತೆ-ಸಾಹಿತಿ ಸಿದ್ದಲಿಂಗ ಪಟ್ಟಣಶೆಟ್ಟಿ
ಕವಿತೆಗೆ ಧ್ವನಿಯ ಶಕ್ತಿ ಇದೆ. ಆ ಮೂಲಕ ಕವಿತೆ ತನ್ನನ್ನು ತಾನು ವಿಶಿಷ್ಟವಾಗಿ ಪರಿಚಯಿಸಿಕೊಳ್ಳುತ್ತದೆ. ಭೂತದ ಸಂಗತಿಗಳು ಭೂತದಂತೆ ನಮ್ಮನ್ನು ಕಾಡಿದಾಗ ಕವಿತೆ ಉದಯಿಸುತ್ತದೆ. ಬರೆಯುವ ಕವಿಗಿಂತ ಅರಿಯುವ ಕವಿ ದೊಡ್ಡವ. ಒಂದು ಕವಿತೆ ತನ್ನ ಅರ್ಥ ಸಾಧ್ಯತೆಗಳನ್ನು ಹೆಚ್ಚಿಸಿಕೊಳ್ಳುತ್ತಾ ಹೋದಂತೆ ಅದು ಶ್ರೀಮಂತವಾಗುತ್ತದೆ. ಸೃಷ್ಟಿ ಕ್ರಿಯೆ ಸದಾ ಸ್ಮೃತಿ ಹಾಗೂ ವಿಸ್ಮೃತಿಗಳ ಮಧ್ಯ ಲಾಲಿಯಾಡುತ್ತಿರುತ್ತದೆ. ಜೀವನದಂತೆ ಕಾವ್ಯವು ಲಯಬದ್ಧವಾದರೆ ಅದು ಸಹೃದಯವನ್ನು ತಲುಪಲು ಸಾಧ್ಯ.
  • < previous
  • 1
  • ...
  • 552
  • 553
  • 554
  • 555
  • 556
  • 557
  • 558
  • 559
  • 560
  • ...
  • 569
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved