ಕಲ್ಯಾಣ ಕರ್ನಾಟಕದ ಹಣ್ಣಿನ ಕಣಜ ಎಂದೇ ಖ್ಯಾತಿಯಾಗಿರುವ ಕೊಪ್ಪಳ ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆಯಿಂದ ಐದು ದಿನಗಳ ಕಾಲ ಆಯೋಜಿಸಿರುವ 8ನೇ ವರ್ಷದ ಹಣ್ಣು ಮತ್ತು ಜೇನು ಮೇಳದಲ್ಲಿ ಜಗತ್ತಿನ ಅತಿ ದುಬಾರಿ ದ್ರಾಕ್ಷಿಯನ್ನು ಪ್ರದರ್ಶನಕ್ಕೆ ಇಡಲಾಗಿದೆ.