ಭಾಗ್ಯನಗರಕ್ಕೆ ಪದವಿ ಕಾಲೇಜ್: ಮಾಹಿತಿ ಸಂಗ್ರಹಿಸಿದ ನಿಯೋಗಕೊಪ್ಪಳದ ಸರ್ಕಾರಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಹನುಮಂತ ನಾಯಕ ದೊಡ್ಡಮನಿ ಹಾಗೂ ಉಪನ್ಯಾಸಕರಾದ ಶಿವನಾಥ್ ಇ.ಜಿ. ಅವರಿದ್ದ ನಿಯೋಗವು ಮಹಾವಿದ್ಯಾಲಯಕ್ಕೆ ಭೇಟಿ ನೀಡಿತ್ತು. ಪ್ರಾಚಾರ್ಯ ರಾಜಶೇಖರ ಪಾಟೀಲ್ ಅವರು, ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ಪದವಿ ಮಹಾವಿದ್ಯಾಲಯ ಪ್ರಾರಂಭಿಸಲು ಬೇಕಾದ ಮೂಲಸೌಕರ್ಯಗಳು ಲಭ್ಯವಿರುವುದನ್ನು ತೋರಿಸಿ, ಪೂರಕ ಮಾಹಿತಿ ಒದಗಿಸಿದರು.