₹34 ಕೋಟಿಯಲ್ಲಿ ಕೊಪ್ಪಳ ರಸ್ತೆ ಅಭಿವೃದ್ಧಿ: ರಾಘವೇಂದ್ರ ಹಿಟ್ನಾಳಕೊಪ್ಪಳ ಕ್ಷೇತ್ರದಲ್ಲಿ ಕಲ್ಯಾಣ ಪಥ ಯೋಜನೆಯಡಿಯಲ್ಲಿ ₹34 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು. ಕ್ಷೇತ್ರದಲ್ಲಿನ ರಸ್ತೆಗಳ ಅಭಿವೃದ್ಧಿಗೆ ಪ್ರಾಮುಖ್ಯ ನೀಡಿದ್ದು, ಹದಗೆಟ್ಟಿರುವ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.