ಹುಲಿಗೆಮ್ಮ ದೇವಿ ರಥೋತ್ಸವಕ್ಕೆ 3 ಲಕ್ಷ ಭಕ್ತರು ಸಾಕ್ಷಿಹುಲಿಗಿಯ ಶ್ರೀಹುಲಿಗೆಮ್ಮ ದೇವಸ್ಥಾನದ ಮಹಾರಥೋತ್ಸವ ಮೂರು ಲಕ್ಷ ಭಕ್ತರ ಜಯಘೋಷಗಳ ನಡುವೆ ಬುಧವಾರ ಸಂಜೆ ಅದ್ಧೂರಿಯಾಗಿ ನಡೆಯಿತು. ಬೆಳಗಿನ ಜಾವದಿಂದ ಮಧ್ಯಾಹ್ನದ ವರೆಗೆ 2 ಲಕ್ಷ ಭಕ್ತರು, ಅಮ್ಮನವರ ದರ್ಶನ ಪಡೆದರೆ, ಸಂಜೆ ನಡೆದ ರಥೋತ್ಸವದಲ್ಲಿ 3 ಲಕ್ಷ ಭಕ್ತರು ಭಾಗವಹಿಸಿದ್ದರು. ಒಟ್ಟಾರೆ 5 ಲಕ್ಷಕ್ಕೂ ಅಧಿಕ ಭಕ್ತರು ಜಾತ್ರೆಗೆ ಸಾಕ್ಷಿಯಾದರು.