ಕುಷ್ಟಗಿಯವರೆಗೆ ರೈಲು ಓಡಾಟ ಪ್ರಾರಂಭಿಸಲು ಮನವಿಸುಮಾರು ವರ್ಷಗಳಿಂದ ನಡೆಯುತ್ತಿರುವ ಗದಗ-ವಾಡಿ ಹೊಸ ರೈಲು ಮಾರ್ಗದ ಕಾಮಗಾರಿ ಕುಷ್ಟಗಿಯವರೆಗೆ ಮುಗಿದಿದ್ದು, ಕುಷ್ಟಗಿವರೆಗೆ ರೈಲು ಓಡಿಸಲು ಒತ್ತಾಯಿಸಿ, ಬಿಜೆಪಿ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್ ಹಾಗೂ ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು.