ಸಾರಾಂಶ
ಒಳಮೀಸಲಾತಿಯಲ್ಲಿ ಬೋವಿ, ಕೊರಚ, ಕೊರಮ ಹಾಗೂ ಲಂಬಾಣಿ ಸಮುದಾಯಗಳಿಗೆ ತೀವ್ರ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಈ ಅನ್ಯಾಯ ಸರಿಪಡಿಸಬೇಕು. ಎಂದು ಆಗ್ರಹಿಸಿ ಪರಿಶಿಷ್ಟ ಜಾತಿ ಮೀಸಲಾತಿ ಸಂರಕ್ಷಣಾ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಬಳ್ಳಾರಿ
ಒಳಮೀಸಲಾತಿಯಲ್ಲಿ ಬೋವಿ, ಕೊರಚ, ಕೊರಮ ಹಾಗೂ ಲಂಬಾಣಿ ಸಮುದಾಯಗಳಿಗೆ ತೀವ್ರ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಈ ಅನ್ಯಾಯ ಸರಿಪಡಿಸಬೇಕು. ತಳ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳನ್ನು ಅರಿತು ಒಳಮೀಸಲು ನೀಡುವ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪರಿಶಿಷ್ಟ ಜಾತಿ ಮೀಸಲಾತಿ ಸಂರಕ್ಷಣಾ ಒಕ್ಕೂಟದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೋಷಿತ ಸಮುದಾಯಗಳ ವಿರೋಧಿಯಾಗಿ ವರ್ತಿಸುತ್ತಿದ್ದಾರೆ. ನಿರ್ದಿಷ್ಟ ಸಮುದಾಯಗಳ ಓಲೈಕೆಗೆ ಎಲ್ಲ ಸ್ತರಗಳಲ್ಲೂ ಅತ್ಯಂತ ಹಿಂದುಳಿದ ಸಮುದಾಯಗಳಾದ ಕೊರಚ, ಕೊರಮ, ಭೋವಿ ಹಾಗೂ ಲಂಬಾಣಿ ಸಮುದಾಯಗಳಿಗೆ ಅನ್ಯಾಯ ಎಸಗಿದ್ದಾರೆ. ಒಳಮೀಸಲಾತಿಯಲ್ಲಿ ಸಾಮಾಜಿಕ ನ್ಯಾಯ ಸಿಗುತ್ತದೆ ಎಂಬ ನಿರೀಕ್ಷೆಯನ್ನು ಸಹ ಮುಖ್ಯಮಂತ್ರಿ ಹುಸಿಗೊಳಿಸಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ಅವೈಜ್ಞಾನಿಕ ಧೋರಣೆಯನ್ನು ಪ್ರತಿಭಟನಾಕಾರರು ಖಂಡಿಸಿದರು. ಕೂಡಲೇ ಸರ್ಕಾರ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿಯಬೇಕು. ಕೊರಚ, ಕೊರಮ, ಭೋವಿ ಹಾಗೂ ಲಂಬಾಣಿ ಸಮುದಾಯಗಳಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಒತ್ತಾಯಿಸಿದರು.