ಕನ್ನಡಪ್ರಭ ವಾರ್ತೆ ಕೊರಟಗೆರೆ
ತುಮಕೂರು ಜಿಲ್ಲೆಯ ಭೀಮ್ ಆರ್ಮಿ ಸಂಘಟನೆಯ ನೂತನ ಜಿಲ್ಲಾಧ್ಯಕ್ಷರಾಗಿ ಕೊರಟಗೆರೆಯ ಗೋಪಾಲಕೃಷ್ಣ ಅವರನ್ನು ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷರಾದ ವಿನಯ್ ಕುಮಾರ್ ಆಜಾದ್ ಅಧಿಕೃತವಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಪಟ್ಟಣದ ಪ್ರವಾಸಿಮಂದಿರದಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊರಟಗೆರೆ ಸೇರಿದಂತೆ ಜಿಲ್ಲೆಯಲ್ಲಿ ಭೀಮ್ ಆರ್ಮಿ ಸಂಘಟನೆ ಬಲಗೊಳಿಸಲು ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷರಾದ ವಿನಯ್ ಕುಮಾರ್ ಆಜಾದ್ ಅವರು ನನ್ನ ಆಯ್ಕೆ ಮಾಡಿದ್ದಾರೆ. ಅವರ ಮಾರ್ಗದರ್ಶನ ಹಾಗೂ ಆದೇಶದ ಮೇರೆಗೆ ಜಿಲ್ಲೆಯಲ್ಲಿ ಮಾದರಿ ಸಂಘಟನೆ ಮಾಡಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು. ದಲಿತರ ಪರ ಹೋರಾಟ ನಡೆಸಿ ದಲಿತರಿಗೆ ನ್ಯಾಯ ಕೊಡಿಸುವುದೇ ಭೀಮ್ ಆರ್ಮಿ ಸಂಘಟನೆಯ ಮೂಲ ಉದ್ದೇಶವಾಗಿದೆ ಎಂದು ಗೋಪಾಲಕೃ? ತಿಳಿಸಿದರು. ಅಲ್ಲದೇ, ಭೀಮ್ ಆರ್ಮಿ ಸಂಘಟನೆಯ ಹೆಸರನ್ನು ಯಾರಾದರೂ ದುರುಪಯೋಗಪಡಿಸಿಕೊಂಡರೆ ಅವರ ವಿರುದ್ಧ ಕಟ್ಟು ನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಯಾವುದೇ ಕಾರ್ಖಾನೆ ಅಥವಾ ಸರ್ಕಾರಿ ಇಲಾಖೆಗಳ ಅಧಿಕಾರಿಗಳಿಗೆ ಭೀಮ್ ಆರ್ಮಿ ಸಂಘಟನೆಯ ಹೆಸರಿನಲ್ಲಿ ಯಾರಾದರೂ ಬೆದರಿಕೆ ಹಾಕುತ್ತಿದ್ದರೆ, ತಕ್ಷಣವೇ ಪೊಲೀಸರಿಗೆ ದೂರು ನೀಡುವಂತೆ ಅವರು ಮನವಿ ಮಾಡಿದರು. ಅಂತಹವರ ವಿರುದ್ಧ ಸಂಘಟನೆಯೇ ಖುದ್ದಾಗಿ ದೂರು ದಾಖಲಿಸಲಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.ಈ ಸುದ್ದಿಗೋಷ್ಠಿಯಲ್ಲಿ ಕೆಂಗನಪಾಳ್ಯ ನವೀನ್‌ಕುಮಾರ್, ಮಧುಗಿರಿ ಚಿರಂಜೀವಿ, ಶಂಕರ್, ಮಂಜುನಾಥ್, ಹ?, ಕಿಶನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.