ಭೀಮಾ ಕೋರೆಂಗಾವ್ ವಿಜಯೋತ್ಸವದ ಅಂಗವಾಗಿ ಜನಪರ ಸಂಘಟನೆಗಳ ಮುಖಂಡರು ಪಟ್ಟಣದ ತಾಲೂಕು ಕಚೇರಿಯಿಂದ ಪ್ರವಾಸಿ ಮಂದಿರದ ಮುಂಭಾಗದ ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿ ಅವರಿಗೆ ತಮಟೆಯೊಂದಿಗೆ ಮೆರವಣಿಗೆ ನಡೆಸಿ ಘೋಷಣೆ ಕೂಗಿದರು.
ಕನ್ನಡಪ್ರಭವಾರ್ತೆ ಮಳವಳ್ಳಿ
ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರ ಸಂಘ, ಅಂಬೇಡ್ಕರ್ ಆಚರಣಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಕೋರೆಗಾಂವ್ ವಿಜಯೋತ್ಸವ ಪಟ್ಟಣದಲ್ಲಿ ನಡೆಯಿತು.ಭೀಮಾ ಕೋರೆಗಾಂವ್ ವಿಜಯೋತ್ಸವ ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರ ಸಂಘದ ನೂತನ ಕಚೇರಿಯನ್ನು ಉದ್ಘಾಟಿಸಿದ ನಂತರ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಡಾ. ಬಿ.ಆರ್ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಕೋರೆಗಾಂವ್ ವಿಜಯೋತ್ಸವಕ್ಕೆ ಶುಭ ಕೋರಿದರು.
ತಾಲೂಕು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರ ಸಂಘ ಅಧ್ಯಕ್ಷ ಎಚ್.ಎಂ.ಮಹೇಶ್, ಉಪಾಧ್ಯಕ್ಷ ಸಂತೋಷ್, ಕಾರ್ಯದರ್ಶಿ ಶಂಕರ್, ಮಂಜುನಾಥ್, ಖಜಾಂಚಿ ನವೀನ್‌ಪ್ರಕಾಶ್, ಮುಖಂಡರಾದ ಮಾರ್ಕಾಲು ಸಿ. ಮಾಧು, ವೇದಮೂರ್ತಿ, ಸಿದ್ದರಾಜು, ಕಿರಣ್, ರಾಘವೇಂದ್ರ, ರಾಜು, ಅರವಿಂದ್, ಮಹದೇವಯ್ಯ, ರವೀಂದ್ರ, ಸಂದೀಪ್‌ಕುಮಾರ್ ಸೇರಿದಂತೆ ಇತರರರಿದ್ದರು.ಭೀಮಾ ಕೋರೆಂಗಾವ್ ವಿಜಯೋತ್ಸವದ ಅಂಗವಾಗಿ ಜನಪರ ಸಂಘಟನೆಗಳ ಮುಖಂಡರು ಪಟ್ಟಣದ ತಾಲೂಕು ಕಚೇರಿಯಿಂದ ಪ್ರವಾಸಿ ಮಂದಿರದ ಮುಂಭಾಗದ ಡಾ. ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅವರಿಗೆ ತಮಟೆಯೊಂದಿಗೆ ಮೆರವಣಿಗೆ ನಡೆಸಿ ಘೋಷಣೆ ಕೂಗಿದರು.
ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ನಿವೃತ್ತ ಪ್ರಾಧ್ಯಾಪಕ ರಂಗಸ್ವಾಮಿ ಮಾತನಾಡಿ, ಪೇಶ್ವೆಗಳ ಆಡಳಿತದಲ್ಲಿ ಜಾತಿ, ಅಸ್ಪೃಶ್ಯತೆ, ಮೇಲು ಕೀಳುಗಳ ವಿರುದ್ಧ ಸೈನಿಕರು ಹೋರಾಟ ನಡೆಸಿ ಗೆಲುವು ಸಾಧಿಸಿದ ಭೀಮಾ ಕೋರೆಗಾಂವ್ ಗೆಲುವು ಸಮಾನತೆಯ ಹೋರಾಟಕ್ಕೆ ಸ್ಫೂರ್ತಿಯಾಗಿದೆ ಎಂದರು.ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯಾಧ್ಯಕ್ಷ ಸುರೇಶ್ ಮಾತನಾಡಿ, ಮಹಾರ್ ಸೈನಿಕರಂತಹ ವೀರರು ಪ್ರತಿಯೊಂದು ಮನೆಯಲ್ಲಿ ಹುಟ್ಟಬೇಕು. ಜನಪರ ಸಂಘಟನೆಗಳೊಂದಿಗೆ ಪಕ್ಷಾತೀತ ಮತ್ತು ಜಾತ್ಯತೀತವಾಗಿ ಆಚರಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.
ಜಯರಾಜು, ಯತೀಶ್, ರೈತಸಂಘದ ಶಿವನಂಜು, ಶಿವಕುಮಾರ್, ಉಮೇಶ್, ಶ್ರೀನಿವಾಸ್, ಯತೀಶ್, ಭರತ್‌ರಾಜ್, ಚೇತನ್‌ಕುಮಾರ್, ಸಿದ್ದರಾಜು, ನಾಗರಾಜು, ಮೆಹಬೂಬ್‌ಪಾಷ, ಶಿವಕುಮಾರ್, ವೇದಾವತಿ, ಸಂದೇಶ್ ಇತರರಿದ್ದರು.