ಸಾರಾಂಶ
ಕನ್ನಡಪ್ರಭ ವಾರ್ತೆ ಕುಂದಾಪುರ
ಕೋಟದ ಮಣೂರು ರಾಷ್ಟ್ರೀಯ ಹೆದ್ದಾರಿಯಿಂದ ಪಡುಕರೆ ಸಂಪರ್ಕಿಸುವ ಹೊಸ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು.ಕೋಟದ ಪಂಚವರ್ಣ ಯುವಕ ಮಂಡಲ ಮತ್ತು ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಜೆಸಿಐ ಕೋಟ ಸಿನಿಯರ್ ಲಿಜನ್, ಕೋಟ ಗ್ರಾಮ ಪಂಚಾಯಿತಿ, ಎಸ್‌ಎಲ್‌ಆರ್‌ಎಂ ಘಟಕಗಳ ಸಹಯೋಗದೊಂದಿಗೆ ೨೪೭ನೇ ಭಾನುವಾರದ ಪರಿಸರಸ್ನೇಹಿ ಸರಣಿ ಅಭಿಯಾನದ ಅಂಗವಾಗಿ ಈ ಕಾರ್ಯಕ್ರಮ ನಡೆಸಲಾಯಿತು.ಕೋಟ ಗ್ರಾಮ ಪಂಚಾಯಿತಿ ಮಣೂರು ವಾರ್ಡ್ ಸದಸ್ಯ ಶಿವರಾಮ ಶೆಟ್ಟಿ ಅಭಿಯಾನಕ್ಕೆ ಚಾಲನೆ ನೀಡಿದರು. ಸ್ಥಳೀಯ ಗಣ್ಯರಾದ ಸತೀಶ್ ಶೆಟ್ಟಿ, ಮಣೂರು ಫ್ರೆಂಡ್ಸ್ ಗೌರವಾಧ್ಯಕ್ಷ ಸುರೇಶ್ ಆಚಾರ್, ಕೋಟ ಪಂಚಾಯಿತಿ ಮಾಜಿ ಸದಸ್ಯ ರವೀಂದ್ರ ಜೋಗಿ, ಪಂಚವರ್ಣ ಯುವಕ ಮಂಡಲದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್, ಸಂಚಾಲಕ ಅಮೃತ್ ಜೋಗಿ, ಉಪಾಧ್ಯಕ್ಷ ದಿನೇಶ್ ಆಚಾರ್, ಜೆಸಿಐ ಸೀನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್, ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಮತ್ತಿತರರು ಇದ್ದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.ಈ ಅಭಿಯಾನದಲ್ಲಿ ಭಾಗವಹಿಸಿದ್ದ ಈ ಸಂಸ್ಥೆಗಳ ಸದಸ್ಯರು ಪ್ಲಾಸ್ಟಿಕ್ ತ್ಯಾಜ್ಯಗಳ ಜೊತೆ ಭಾರಿ ಪ್ರಮಾಣದಲ್ಲಿ ಪ್ಲಾಸ್ಟಿಕ್ ಮತ್ತು ಗಾಜಿನ ಬಾಟಲಿಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡಿದರು.