ಸಾರಾಂಶ
ಹಂಗಾರಕಟ್ಟೆ ಮಾಬುಕಳದ ಚೇತನಾ ಪ್ರೌಢಶಾಲೆಯಲ್ಲಿ ಉಡುಪಿ ಲೋಕಾಯುಕ್ತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ಸೈಬರ್ ಜಾಗೃತಿ - ಕಾನೂನು ಮಾಹಿತಿ - ನಮ್ಮ ಜವಾಬ್ದಾರಿ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕನ್ನಡಪ್ರಭ ವಾರ್ತೆ ಕೋಟ
ಇಲ್ಲಿನ ಹಂಗಾರಕಟ್ಟೆ ಮಾಬುಕಳದ ಚೇತನಾ ಪ್ರೌಢಶಾಲೆಯಲ್ಲಿ ಉಡುಪಿ ಲೋಕಾಯುಕ್ತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ಸೈಬರ್ ಜಾಗೃತಿ - ಕಾನೂನು ಮಾಹಿತಿ - ನಮ್ಮ ಜವಾಬ್ದಾರಿ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ಪ್ರಭಾರ ಉಪ ನಿರೀಕ್ಷಕ ಮಂಜುನಾಥ, ಕಾರ್ಯಕ್ರಮಕ್ಕೆ ಚಾಲನೆ ನೀಡಿ ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಪಾತ್ರ ಮತ್ತು ಸೈಬರ್ ಸೈಕ್ಯುರಿಟಿ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯೆ ವಿನಯ, ಕಾನೂನು ಅರಿವು ಕಾರ್ಯಕ್ರಮದಡಿ ಮಕ್ಕಳ ಹಕ್ಕು, ಪೋಕ್ಸೋ ಕಾಯಿದೆ ಬಗ್ಗೆ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿಯ ಉಪಾಧ್ಯಕ್ಷ ವಿಘ್ನೇಶ್ವರ ಅಡಿಗ, ಮಾಬುಕಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಆನಂದ ಗಾಣಿಗ, ಬಾಳ್ಕುದ್ರು ಐರೋಡಿ ವಿಪ್ರ ವೇದಿಕೆಯ ಡಾ.ಕೃಷ್ಣಮೂರ್ತಿ ಮಕ್ಕಿತ್ತಾಯ, ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್‌ಅಧ್ಯಕ್ಷೆ ಜ್ಯೋತಿ ಉದಯ ಪೂಜಾರಿ ಇದ್ದರು. ಶಾಲೆಯ ಮುಖ್ಯ ಶಿಕ್ಷಕಿ ಕಲ್ಪನಾ ಸ್ವಾಗತಿಸಿದರು. ಅಧ್ಯಾಪಕ ಫಕೀರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ ವಂದಿಸಿದರು.ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್, ಬಾಳ್ಕುದ್ರು ಐರೋಡಿ ವಿಪ್ರ ವೇದಿಕೆ, ಫಾರ್ಚುನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸ್ ಮತ್ತು ಮಾಬುಕಳದ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಭಾಗವಹಿಸುವಿಕೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಈ ಮಾಹಿತಿ ವಿನಿಮಯ, ಜಾಗೃತಿ ಮತ್ತು ಅರಿವು ಕಾರ್ಯಕ್ರಮ ಹಮ್ಮಿಕೊಂಡಿದ್ದು ವಿಶೇಷವಾಗಿತ್ತು.;Resize=(128,128))
;Resize=(128,128))
;Resize=(128,128))