ಸಾರಾಂಶ
ವಿಪಕ್ಷನಾಯಕರಾದ ಬಳಿಕ ಉಢುಪಿಗೆ ಪ್ರಥಮ ಬಾರಿಗೆ ಭೇಟಿ ನೀಡಿದ ಆರ್. ಅಶೋಕ್ ಅವರನ್ನು ಉಡುಪಿ ಬಿಜೆಪಿಯಿಂದ ಗೌರವಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿರಾಜ್ಯ ವಿಧಾನ ಸಭೆಯ ವಿಪಕ್ಷ ನಾಯಕರಾಗಿ ಪ್ರಥಮ ಬಾರಿಗೆ ಉಡುಪಿಗೆ ಭೇಟಿ ನೀಡಿದ ಆರ್. ಅಶೋಕ್ ಅವರನ್ನು ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜ್, ಟಿ.ದಾಸರಹಳ್ಳಿ ಶಾಸಕ ಎಸ್.ಮುನಿರಾಜು, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್ ಹಾಗೂ ರಾಜ್ಯ, ಜಿಲ್ಲಾ, ಮೋರ್ಚಾ, ಪ್ರಕೋಷ್ಟ ಮತ್ತು ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.