ಕೋಟ ಶ್ರೀನಿವಾಸ ಪೂಜಾರಿ, ಜೆಪಿ ಹೆಗ್ಡೆ ನಾಮಪತ್ರ ಸಲ್ಲಿಕೆ

| Published : Apr 04 2024, 01:03 AM IST

ಸಾರಾಂಶ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬುಧವಾರ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್‌ನ ಜಯಪ್ರಕಾಶ್‌ ಹೆಗ್ಡೆ ಅವರು ನಾಮಪತ್ರ ಸಲ್ಲಿಸಿದರು. ಇಲ್ಲಿವರೆಗೆ ಈ ಕ್ಷೇತ್ರದಲ್ಲಿ ಏಳು ಮಂದಿ ನಾಮಪತ್ರ ಸಲ್ಲಿಸಿದ್ದರು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಬುಧವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದರು.

ಅವರೊಂದಿಗೆ ಬಿಜೆಪಿಯ ಶಾಸಕರಾದ ಯಶ್ಪಾಲ್ ಸುವರ್ಣ ಮತ್ತು ಗುರ್ಮೆ ಸುರೇಶ್ ಶೆಟ್ಟಿ, ಜೆಡಿಎಸ್‌ ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರ.ಕಾರ್ಯದರ್ಶಿ ಸಿ.ಟಿ.ರವಿ ಉಪಸ್ಥಿತರಿದ್ದರು.

* ನಾಮಪತ್ರ ಸಲ್ಲಿಸಿದ ಕೆ.ಜಯಪ್ರಕಾಶ್ ಹೆಗ್ಡೆಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಬುಧವಾರ ಬೆಳಗ್ಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದರು.ಈ ಸಂದರ್ಭ ಅವರೊಂದಿಗೆ ಕಾಂಗ್ರೆಸ್ ಪಕ್ಷದಿಂದ ಕ್ಷೇತ್ರದ ಚುನಾವಣಾ ಉಸ್ತುವಾರಿ ಇಂಧನ ಸಚಿವ ಕೆ.ಜೆ.ಜಾರ್ಜ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ, ಚಿಕ್ಕಮಗಳೂರು ಕಾಂಗ್ರೆಸ್ ಅಧ್ಯಕ್ಷ ಡಾ.ಅಂಶುಮಂತ್, ಮಾಜಿ ಸಚಿವೆ ಮೋಟಮ್ಮ ಉಪಸ್ಥಿತರಿದ್ದರು.

* ಕೋಟರ ಪತ್ನಿ ಕೋಟ್ಯಧಿಪತಿಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಕೋಟ ಶ್ರೀನಿವಾಸ ಪೂಜಾರಿ ಅವರು 31,95,082 ರು.ಗಳಷ್ಟು ಚರಾಸ್ತಿಯನ್ನೂ, 48,00,000 ರು.ಗಳಷ್ಟು ಸ್ಥಿರಾಸ್ತಿಯನ್ನೂ ಸೇರಿ ಒಟ್ಟು 79,95,082 ರು. ಮೌಲ್ಯದ ಆಸ್ತಿಪಾಸ್ತಿಯನ್ನು ಹೊಂದಿದ್ದಾರೆ. ಜೊತೆಗೆ 40,64,920 ರು. ಸಾಲವನ್ನೂ ಪಡೆದಿದ್ದಾರೆ.

ಅವರ ಪತ್ನಿಯ ಬಳಿ 55,00,000 ರು.ಗಳ ಚರಾಸ್ತಿ, 97,00,000 ರು.ಗಳ ಸ್ಥಿರಾಸ್ತಿ ಮತ್ತು 80,00,000 ರು.ಗಳ ಕಟ್ಟಡ ಸೇರಿ 1,62,79,027 ರು, ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಅವರ ಹೆಸರಿನಲ್ಲಿ 35,43,757 ರು. ಸಾಲವೂ ಇದೆ.

* ಕಾಂಗ್ರೆಸ್‌ ಅಭ್ಯರ್ಥಿ ಹೆಗ್ಡೆ ಅವರೂ ಕೋಟಿಪತಿಹೆಗ್ಡೆ ಅವರು 35,34,326 ರು.ಗಳ ಚರಾಸ್ತಿ ಮತ್ತು 13,13,61,587 ರು.ಗಳ ಸ್ಥಿರಾಸ್ತಿ ಸೇರಿ ಒಟ್ಟು 13,48,95,913 ರು. ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಹಾಗೆಯೇ 15,00,000 ರು.ಗಳ ಸಾಲ ಇದೆ. ಬೆಂಗಳೂರಿನಲ್ಲಿ ಮನೆ ಮತ್ತು ಭೂಮಿಯನ್ನು ಹೊಂದಿದ್ದಾರೆ.ಅವರ ಪತ್ನಿ 81,46,544 ರು. ಮೌಲ್ಯದ ಚರಾಸ್ತಿ, 1,05,00,180 ರು. ಮೌಲ್ಯದ ಸ್ಥಿರಾಸ್ತಿಯನ್ನು ಹೊಂದಿದ್ದಾರೆ. ಅವರ ಬಳಿ 64 ಲಕ್ಷ ರು. ಮೌಲ್ಯದ ಚಿನ್ನಾಭರಣಗಳಿವೆ.