ಇಲ್ಲಿನ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ಮತ್ತು ಕಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಯಿತು.

ಕೋಟ: ಇಲ್ಲಿನ ವಿವೇಕ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ಮತ್ತು ಕಲಾ ವಿಭಾಗದ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್‌ ಗಳಿಸಿದ್ದ, ಉಡುಪಿ ಸಂಸದರ ಆಪ್ತ ಸಹಾಯಕ ಹರೀಶ್ ಶೆಟ್ಟಿ ಅವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ವಿವಿಧ ವೃತ್ತಿ ಅವಕಾಶಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಅಮೂಲ್ಯವಾದ ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ವೃತ್ತಿಯನ್ನು ಆಯ್ಕೆ ಮಾಡಿಕೊಂಡು, ಸ್ಪಷ್ಟ ಗುರಿ, ನಿರಂತರ ಪರಿಶ್ರಮ ಮತ್ತು ಶಿಸ್ತಿನ ಮೂಲಕ ಯಶಸ್ಸು ಸಾಧಿಸಬೇಕೆಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಕೆ. ಜಗದೀಶ ನಾವಡ ವಹಿಸಿ, ಅತಿಥಿಗಳನ್ನು ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಕೋಟ ವಿದ್ಯಾಸಂಘದ ಅಧ್ಯಕ್ಷ ಭಾಸ್ಕರ್ ಹಂದೆ ಉಪಸ್ಥಿತರಿದ್ದರು.

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪ್ರಾಪ್ತಿ ಕಾರ್ಯಕ್ರಮವನ್ನು ನಿರೂಪಿಸಿದಳು. ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥೆ ಜಯಶ್ರೀ ವಂದನಾರ್ಪಣೆ ಸಲ್ಲಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಸಂಜೀವ ಕಾರ್ಯಕ್ರಮವನ್ನು ಸಂಘಟಿಸಿದರು.