ಹೊರೂರು ಗ್ರಾಮದ ಕೋಟೆಕಾಡು ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ರೈಟರ್ ಮೇಲೆ ಕಾಡುಕೋಣ ದಾಳಿ ನಡೆಸಿರುವ ಘಟನೆ ಶನಿವಾರ ನಡೆದಿದೆ.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಹೊರೂರು ಗ್ರಾಮದ ಕೋಟೆಕಾಡು ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ರೈಟರ್ ಮೇಲೆ ಕಾಡುಕೋಣ ದಾಳಿ ನಡೆಸಿರುವ ಘಟನೆ ಶನಿವಾರ ನಡೆದಿದೆ. ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊರೂರು ಗ್ರಾಮದ ಕೋಟೆಕಾಡು ತೋಟದಲ್ಲಿ ಮುತ್ತಪ್ಪ (62) ಗಾಯಾಳು. ಅವರು ತೋಟದ ರೈಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದು ಎಂದಿನಂತೆ ಬೆಳಗ್ಗೆ 11 ಗಂಟೆಯ ಸಂದರ್ಭದಲ್ಲಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕಾಡುಕೋಣ ಒಂದು ಏಕಾಏಕಿ ಆಗಮಿಸಿ ದಾಳಿ ನಡೆಸಿದೆ. ಕಾಡುಕೋಣದ ದಾಳಿಯಿಂದ ಮುತ್ತಪ್ಪ ಕಾಲು ಮುರಿತಗೊಂಡು ದೇಹದ ಇತರ ಭಾಗಗಳಿಗೆ ಗಾಯಗಳು ಉಂಟಾಗಿದ್ದು ಜಿಲ್ಲಾಸ್ಪತ್ರೆಗೆ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.ಸ್ಥಳಕ್ಕೆ ಅರಣ್ಯ ಇಲಾಖೆಯವರು ಆಗಮಿಸಿ ಮುತ್ತಪ್ಪ ಅವರನ್ನು ಭೇಟಿ ಚಿಕಿತ್ಸೆ ಪೂರಕವಾದ ವ್ಯವಸ್ಥೆಯನ್ನು ಹಾಗೂ ಸ್ಥಳ ಪರಿಶೀಲನೆ ನಡೆಸಿದರು.