ಸಾರಾಂಶ
ಕನ್ನಡಪ್ರಭ ವಾರ್ತೆ ಬಂಟ್ವಾಳ ಬಂಟ್ವಾಳ ತಾಲೂಕು ಬಿಲ್ಲವ ಸೇವಾ ಸಂಘ ರಿ.ಗಾಣದಪಡ್ಪು ಬಿ.ಸಿ. ರೋಡು ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ಯುವವಾಹಿನಿ ಹಾಗೂ ಬಿಲ್ಲವ ಮಹಿಳಾ ಸಮಿತಿಯ ಜಂಟಿ ಆಶ್ರಯದಲ್ಲಿ ಜ.19 ರಂದು ನಡೆಯುವ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವದ ಲಾಂಛನ ಬಿಡುಗಡೆ ಹಾಗೂ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಬಿ.ಸಿ. ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು. ಲಾಂಛನ ಬಿಡುಗಡೆಗೊಳಿಸಿದ ಉದ್ಯಮಿ, ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿ ಜಗದೀಶ್ ಡಿ. ಸುವರ್ಣ ಮಾತನಾಡಿ, ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಮೂಲಕ ಸಮಾಜಮುಖಿಯಾದ ಉತ್ತಮ ಕಾರ್ಯ ನಡೆಯಬೇಕು. ಬಿಲ್ಲವ ಸಮಾಜದ ಯುವ ಕ್ರೀಡಾಪಟುಗಳು ಕ್ರೀಡೆಯ ಮೂಲಕ ಸಾಧನೆಯನ್ನು ಮಾಡಲು ಇಂತಹ ಕ್ರೀಡೋತ್ಸವ ಅಗತ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಮಾತನಾಡಿದರು.ತಾಲೂಕು ಬಿಲ್ಲವ ಸಂಘದ ಮಾಜಿ ಅಧ್ಯಕ್ಷರುಗಳಾದ ಹರಿಕೃಷ್ಣ ಬಂಟ್ವಾಳ್, ಚಂದ್ರಶೇಖರ ಪೂಜಾರಿ, ರಾಮಪ್ಪ ಪೂಜಾರಿ ಮಾರ್ನಬೈಲು, ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಎಂ. ತುಂಬೆ, ಯುವವಾಹಿನಿ ಅಧ್ಯಕ್ಷ ದಿನೇಶ್ ರಾಯಿ, ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ಶೈಲಜಾ ರಾಜೇಶ್, ಪ್ರಚಾರ ಸಮಿತಿ ಸಂಚಾಲಕ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಕೋಶಾಧಿಕಾರಿ ಆನಂದ ಶಂಭೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕೋಟಿ ಚೆನ್ನಯ ಕ್ರೀಡೋತ್ಸವ ಕಾರ್ಯಕ್ರಮದ ಸಂಚಾಲಕ ಬೇಬಿ ಕುಂದರ್ ಪ್ರಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಮೇಶ್ ಎಂ. ತುಂಬೆ ವಂದಿಸಿದರು. ಯುವವಾಹಿನಿ ಅಧ್ಯಕ್ಷ ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು.