ಪುತ್ತಿಗೆ ಶ್ರೀಗಳಿಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಗೆ ಕೋಟಿ ಗೀತಾ ಅಭಿಯಾನ ದೀಕ್ಷೆ

| Published : Mar 29 2024, 12:49 AM IST

ಪುತ್ತಿಗೆ ಶ್ರೀಗಳಿಂದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಗೆ ಕೋಟಿ ಗೀತಾ ಅಭಿಯಾನ ದೀಕ್ಷೆ
Share this Article
  • FB
  • TW
  • Linkdin
  • Email

ಸಾರಾಂಶ

ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪದೊಂದಿಗೆ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ನಡೆಸುತ್ತಿರುವ ಕೋಟಿ ಗೀತಾ ಲೇಖನ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ಸಂಕಲ್ಪದೊಂದಿಗೆ ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ನಡೆಸುತ್ತಿರುವ ಕೋಟಿ ಗೀತಾ ಲೇಖನ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ. ಈ ಮೂಲಕ ಉಡುಪಿಯಿಂದ ನರೇಂದ್ರ ಮೋದಿಯವರ ಗೆಲುವಿಗೆ ಹೊಸ ಸಂದೇಶ ರವಾನೆ ಮಾಡಿದ್ದಾರೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.ಗುರುವಾರ ಉಡುಪಿ ಶ್ರೀಕೃಷ್ಣ ಮಠದ ಗೀತಾ ಮಂದಿರದಲ್ಲಿ ಪುತ್ತಿಗೆ ಶ್ರೀಪಾದರು ಬಿಜೆಪಿ ಕಾರ್ಯಕರ್ತರಿಗೆ ಕೋಟಿ ಗೀತಾ ಲೇಖನ ಪುಸ್ತಕವನ್ನು ಹಸ್ತಾಂತರಿಸಿ ಆಶೀರ್ವಚಿಸಿದ ಸಂದರ್ಭದಲ್ಲಿ ಶಾಸಕರು ಮಾತನಾಡಿದರು.ಸಂದೇಶ ನೀಡಿದ ಶ್ರೀಗಳು, ಶ್ರೀ ಕೃಷ್ಣನಿಗೆ ಅತ್ಯಂತ ಪ್ರಿಯವಾಗಿರುವ ಗೀತಾ ಸಂದೇಶವನ್ನು ಸಾರುವ ಕಾರ್ಯ ಅತ್ಯಂತ ಶ್ರೇಷ್ಠವಾಗಿದ್ದು, ಕೋಟಿ ಗೀತಾ ಲೇಖನ ಅಭಿಯಾನದದಲ್ಲಿ ತಮ್ಮನ್ನು ತೊಡಗಿಸಿಕೊಂಡ ತಮ್ಮ ಸಂಕಲ್ಪ ಸಾಕಾರಗೊಳ್ಳುವ ಬಗ್ಗೆ ಯಾವುದೇ ಸಂದೇಹವಿಲ್ಲ ಎಂದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಶ್ರೀಪಾದರ ಆಶೀರ್ವಾದ ಪಡೆದು ಯುವಮೋರ್ಚಾ ಕಾರ್ಯಕರ್ತರ ಈ ಕಾರ್ಯ ಸರ್ವರಿಗೂ ಮಾದರಿಯಾಗಿ ನರೇಂದ್ರ ಮೋದಿಯವರ ಗೆಲುವಿನ ಸಂಕಲ್ಪ ಸಿದ್ಧಿಯಾಗಲಿ ಎಂದು ಆಶಿಸಿದರು.

ಈ ಸಂದರ್ಭ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪ್ರ.ಕಾರ್ಯದರ್ಶಿ ಶಶಾಂಕ್ ಶಿವತ್ತಾಯ, ಪಕ್ಷದ ಪ್ರಮುಖರಾದ ರಾಜೇಶ್ ಕಾವೇರಿ, ವೀಣಾ ಎಸ್. ಶೆಟ್ಟಿ, ಯುವಮೋರ್ಚಾ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ, ಯುವಮೋರ್ಚಾದ ಜಿಲ್ಲಾ ಹಾಗೂ ಮಂಡಲದ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.