ಕಾಂಗ್ರೆಸ್ ಮುಖಂಡರೊಂದಿಗೆ ಆಸ್ಪತ್ರೆಗೆ ತೆರಳಿದ ಶಾಸಕರು, ಘಟನೆಗೆ ಸಂಬಂಧಿಸಿದಂತೆ ಬಾಲಕಿ ಹಾಗೂ ಕುಟುಂಬದವರಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಬಾಲಕಿಗೆ ನೀಡಲಾಗುತ್ತಿರುವ ಚಿಕಿತ್ಸೆ ಹಾಗೂ ಆರೋಗ್ಯದ ಸ್ಥಿತಿಗತಿಯ ಕುರಿತು ವೈದ್ಯರಿಂದ ಮಾಹಿತಿ ಪಡೆದ ಅವರು, ಬಾಲಕಿಗೆ ಅಗತ್ಯವಿರುವ ಎಲ್ಲ ರೀತಿಯ ವೈದ್ಯಕೀಯ ನೆರವು ಒದಗಿಸುವಂತೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಕೋಲಾರ

ಬಂಗಾರಪೇಟೆಯಲ್ಲಿ ನಡೆದಿರುವ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ. ಮಂಜುನಾಥ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಅವರು ನಗರದ ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿ ಹಾಗೂ ಕುಟುಂಬದವರ ಆರೋಗ್ಯ ವಿಚಾರಿಸಿದರು.

ಕಾಂಗ್ರೆಸ್ ಮುಖಂಡರೊಂದಿಗೆ ಆಸ್ಪತ್ರೆಗೆ ತೆರಳಿದ ಶಾಸಕರು, ಘಟನೆಗೆ ಸಂಬಂಧಿಸಿದಂತೆ ಬಾಲಕಿ ಹಾಗೂ ಕುಟುಂಬದವರಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಬಾಲಕಿಗೆ ನೀಡಲಾಗುತ್ತಿರುವ ಚಿಕಿತ್ಸೆ ಹಾಗೂ ಆರೋಗ್ಯದ ಸ್ಥಿತಿಗತಿಯ ಕುರಿತು ವೈದ್ಯರಿಂದ ಮಾಹಿತಿ ಪಡೆದ ಅವರು, ಬಾಲಕಿಗೆ ಅಗತ್ಯವಿರುವ ಎಲ್ಲ ರೀತಿಯ ವೈದ್ಯಕೀಯ ನೆರವು ಒದಗಿಸುವಂತೆ ಸೂಚಿಸಿದರು.

ಬಾಲಕಿಯ ಕುಟುಂಬದವರೊಂದಿಗೆ ಮಾತನಾಡಿ, ಧೈರ್ಯ ತುಂಬಿ, ಪ್ರಕರಣದ ತನಿಖೆ ನ್ಯಾಯಸಮ್ಮತವಾಗಿ ನಡೆಯಲು ಹಾಗೂ ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಉಪಸ್ಥಿತರಿದ್ದರು.